ಸುಗಮ ಕಲಾಪ ನಡೆಯಬೇಕಿದ್ದರೆ, ಮತಾಂತರ ಬಗ್ಗೆ ಮೋದಿ ಉತ್ತರಿಸಲಿ: ಖರ್ಗೆ

ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಮತಾಂತರ ಪ್ರಕ್ರಿಯೆಗಳು ಹೆಚ್ಚುತ್ತಿದ್ದು, ಮತಾಂತರ ವಿವಾದ ಸೋಮವಾರ ಲೋಕಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿತು.

ಮತಾಂತರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸದನಕ್ಕೆ ಉತ್ತರ ನೀಡಬೇಕು ಎಂದು ವಿಪಕ್ಷಗಳ ಸದಸ್ಯರು ಒತ್ತಾಯಿಸಿದ್ದರು. ಮತಾಂತರ ಕುರಿತಂತೆ ಮೋದಿ ಅವರು ಮೌನ ವಹಿಸಿರುವುದೇಕೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಶ್ನಿಸಿದರು.

ಮತಾಂತರ ಬಗ್ಗೆ ಸರ್ಕಾರದ ನಿಲುವನ್ನು ಪ್ರಧಾನಿ ಮೋದಿ ಅವರು ಉತ್ತರಿಸಬೇಕು. ಇಲ್ಲದಿದ್ದರೆ ಸುಗಮ ಕಲಾಪಕ್ಕೆ ಅವಕಾಶ ನೀಡುವುದಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಎಚ್ಚರಿಸಿದ್ದರು. ಈ ವೇಳೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮತಾಂತರಕ್ಕೆ ಉತ್ತೇಜನ ನೀಡುತ್ತಿಲ್ಲ. ಬಲವಂತವಾಗಿ ಮತಾಂತರ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮತಾಂತರದಲ್ಲಿ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ನಾಯ್ಡು ಅವರು ಸ್ಪಷ್ಟಪಡಿಸಿದರು.

ಲೋಕಸಭೆ ಕಲಾಪ ಶುರುವಾಗುತ್ತಿದ್ದಂತೆ ವಿಪಕ್ಷಗಳ ಸದಸ್ಯರು ಗದ್ದಲವೆಬ್ಬಿಸಿದರು. ಮತಾಂತರ ಕುರಿತಂತೆ ಮೋದಿ ಅವರು ಉತ್ತರಬೇಕು ಎಂದು ಪಟ್ಟು ಹಿಡಿದವು.

ಉಪಸಭಾಧ್ಯಕ್ಷರ ಮೇಲೆ ಪೇವರ್ ಎಸೆದ ಆರ್‌ಜೆಡಿ ಸಂಸದ
ಮತಾಂತರ ವಿವಾದದ ಗದ್ದಲದ ವೇಳೆ ಲೋಕಸಭೆಯಲ್ಲಿ ಆರ್‌ಜೆಡಿ ಶಾಸಕ ಪಪ್ಪುಯಾದವ್ ಉಪಸಭಾಧ್ಯಕ್ಷರ ಮೇಲೆ ಪೇಪರ್ ಎಸೆದು ಅಸಭ್ಯ ವರ್ತನೆ ತೋರಿದ್ದಾರೆ. ಇದರಿಂದ ವಿಚಲಿತರಾದ ಉಪಸಭಾಧ್ಯಕ್ಷರು ಪಪ್ಪುಯಾದವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಲೋಕಪಾಲ್ ತಿದ್ದುಪಡಿ ವಿಧೇಯಕ ಮಂಡನೆ
ಲೋಕಸಭೆಯಲ್ಲಿ ವಿಪಕ್ಷಗಳ ವಿರೋಧದ ನಡುವೆಯೇ ಲೋಕಪಾಲ್ ತಿದ್ದುಪಡಿ ವಿಧೇಯಕವನ್ನು ಮಂಡನೆ ಮಾಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com