
ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನೇತೃತ್ವದಲ್ಲಿ ಜನತಾ ಪರಿವಾರದ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಮಹಾಧರಣಿ ಆರಂಭಿಸಿದ್ದು, ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.
ಜೆಡಿಯು, ಜೆಡಿಎಸ್, ಐಎನ್‌ಎಲ್‌ಡಿ, ಎಸ್‌ಜೆಪಿ, ಆರ್‌ಜೆಡಿ ಮತ್ತು ಎಸ್ಪಿ ಸೇರಿದಂತೆ ಆರು ಜಾತ್ಯಾತೀತ ಪಕ್ಷಗಳ ನಾಯಕು ಇಂದು ಬೆಳಗ್ಗೆಯಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿವೆ.
ಕಪ್ಪು ಹಣ ವಾಪಸ್ ತರುವುದು ಹಾಗೂ ಮರು ಮತಾಂತರ ಸೇರಿದಂತೆ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಜನತಾ ಪರಿವಾರದ ನಾಯಕರು ಆರೋಪಿಸಿದ್ದಾರೆ.
ಈ ವೇಳೆ ಮಾತನಾಡಿದ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಅಲ್ಲದೆ ಕಪ್ಪು ಹಣ ವಾಪಸ್ ತರಲು ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಎಸ್ಪಿ ಮುಖಂಡ ಅಜಂಖಾನ್, ಜೆಡಿಯು ನಾಯಕ ಶರದ್ ಯಾದವ್ ಸೇರಿದಂತೆ ಹಲವು ನಾಯಕರು ಧರಣಿಯಲ್ಲಿ ಭಾಗವಹಿಸಿದ್ದಾರೆ.
Advertisement