ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ?

ದೇಶದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿಯನ್ನು ಪಡೆಯಲು ವಾಜಪೇಯಿ ಅರ್ಹ ವ್ಯಕ್ತಿ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಕೊಡಬೇಕೆಂದು, ಬಿಜೆಪಿ ಭೀಷ್ಮ ಎಲ್.ಕೆ.ಆಡ್ವಾಣಿ ಮನವಿ ಮಾಡಿದ್ದಾರೆ.

ಭಾರತ ರತ್ನ ಪ್ರಶಸ್ತಿಯನ್ನು ಅಟಲ್ ಬಿಹಾರಿ ವಾಜಪೇಯಿ ದೇಶಕ್ಕೆ ನೀಡಿರುವ ಕೊಡುಗೆಯೊಂದಿಗೆ, ಅವರ ದೇಶ ಭಕ್ತಿಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಶಿಫಾರಸು ಮಾಡಬೇಕು ಎಂದು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದ ವೇಳೆ ತಿಳಿಸಿದ್ದಾರೆ.

ಡಿಸೆಂಬರ್ 25 ವಾಜಪೇಯಿ ಹುಟ್ಟಿದ ದಿನಾಂಕವನ್ನು ಕೇಂದ್ರ ಸರ್ಕಾರ ಉತ್ತಮ ಆಡಳಿತ ದಿನವಾಗಿ ಆಚರಣೆ ಮಾಡಲು ನಿರ್ಧರಿಸಿದೆ. ಅಂದೇ ಈ ಪ್ರಶಸ್ತಿ ನೀಡುವ ಕುರಿತು ನಿರ್ಧಾರವಾಗಲಿದೆ ಎಂದು ಆಡ್ವಾಣಿ ಸುಳಿವು ನೀಡಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು, ದೇಶಭಕ್ತ, ಉತ್ತಮ ಆಡಳಿತಗಾರನಾಗಿದ್ದು ಹಲವು ವಿಶೇಷತೆಗಳಿಂದ ಕೂಡಿದ ಮಹಾನ್ ಚೇತನರಾಗಿದ್ದಾರೆ. ಆದ್ದರಿಂದ ದೇಶದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿಯನ್ನು ಪಡೆಯಲು ಅವರು ಅರ್ಹ ವ್ಯಕ್ತಿಯಾಗಿದ್ದಾರೆ ಎಂದು ಅವರನ್ನು ಆಡ್ವಾಣಿ ಶ್ಲಾಘಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com