

ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಕಳೆದ ಬಾರಿ 11 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪಿಡಿಪಿ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅಗ್ರಸ್ಥಾನದಲ್ಲಿದೆ. ಆದರೆ ಕಳೆದ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದ ಸಿಎಂ ಓಮರ್ ಅಬ್ದುಲ್ಲಾ ಬಾರಿ ಹಿನ್ನೆಡೆಯಾಗಿದೆ.
ಮತ್ತೊಂದೆಡೆ ಜಾರ್ಖಂಡ್ನಲ್ಲಿ ಬಿಜೆಪಿ 30 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇಳಿದಂತೆ ಕಾಂಗ್ರೆಸ್ ಕೇವಲ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಎಂಎಂ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಎರಡನೇ ದೊಡ್ಡ ಪಕ್ಷವಾಗಿದೆ.
ಮಧ್ಯಾಹ್ನ ವೇಳೆ ಸಂಪೂರ್ಣ ಫಲಿತಾಂಶ ಹೊರ ಬೀಳಲಿದ್ದು, ಯಾವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿವೆ ಎಂಬುದು ಸ್ಪಷ್ಟವಾಗಲಿದೆ.