ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಾಲೆಯ ಮಾಲಿ

7 ವರ್ಷದ ಬಾಲಕಿಗೆ ಖಾಸಗಿ ಶಾಲೆಯೊಂದರ ಮಾಲಿ ಲೈಂಗಿಕ ಕಿರುಕುಳ ನೀಡಿರುವ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಾಲೆಯ ಮಾಲಿ

ನವದೆಹಲಿ: 7 ವರ್ಷದ ಬಾಲಕಿಗೆ ಖಾಸಗಿ ಶಾಲೆಯೊಂದರ ಮಾಲಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ದೆಹಲಿಯ ಖಾಸಗಿ ಶಾಲೆಯ ಮಾಲಿ ಶಂಕರ್(50) ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 7 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿನಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com