ದೆಹಲಿಯಲ್ಲಿ ವೈದ್ಯೆ ಮೇಲೆ ಆ್ಯಸಿಡ್ ದಾಳಿ
ನವದೆಹಲಿ: ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮಹಿಳಾ ವೈದ್ಯರ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿರುವ ಘಟನೆ ಮಂಗಳವಾರ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ರಜೌರಿ ಗಾರ್ಡನ್‌ನ ಮಾರುಕಟ್ಟೆ ಬಳಿ ನಿನ್ನೆ ಬೆಳಗ್ಗೆ 9.25 ಸುಮಾರಿನಲ್ಲಿ ಘಟನೆ ನಡೆದಿದ್ದು, ಡಾ. ಅಮ್ರಿತಾ ಕೌರ್(30) ಆಸ್ಪತ್ರೆಗೆ ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಆಕೆಯ ಮುಖಕ್ಕೆ ಆ್ಯಸಿಡ್ ಎರಚಿ, ಆಕೆ ಬಳಿ ಇದ್ದ ಪರ್ಸ್ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಕ್ಷಣ ವೈದ್ಯೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ್ಯಸಿಡ್ ಎರಚಿದ ಪರಿಣಾಮ ವೈದ್ಯೆಯ ಮುಖ, ಕತ್ತು ಭಾಗ ಮತ್ತು ಬಲಗಣ್ಣು ಸುಟ್ಟು ಹೋಗಿದೆ.
ಆರೋಪಿಗಳ ವೇಷಭೂಷದ ಬಗ್ಗೆ ಅಲ್ಲಿದ್ದ ಸ್ಥಳೀಯರು ಮಾಹಿತಿ ನೀಡಿದ್ದು, ರಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕಳ್ಳತನ ಮತ್ತು ಆ್ಯಸಿಡ್ ದಾಳಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಬಿ ಪುಷ್ಪೇಂದ್ರ ಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ