

ದೆಹಲಿ: ದೆಹಲಿಯ ರಜೌರಿ ಗಾರ್ಡನ್ ಬಳಿ ಮಂಗಳವಾರ ವೈದ್ಯೆಯ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣ ಸಂಬಂಧ, ದೆಹಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆ್ಯಸಿಡ್ ದಾಳಿಗೆ ಒಳಗಾದ ವೈದ್ಯೆ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ದಾಳಿ ನಡೆಸಿದ ಆರೋಪಿಗಳು 17 ರಿಂದ 22 ವರ್ಷಗಳಿಂದ ಕೂಡಿದವರಾಗಿದ್ದಾರೆ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೈದ್ಯೆ ಮಾಹಿತಿ ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು, ವೈದ್ಯೆಯ ಮಾಹಿತಿ ಮೇರೆಗೆ ಇಬ್ಬರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ವೇಳೆ ಇಬ್ಬರು ಯುವಕರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಮಂಗಳವಾರದಂದು ಬೈಕ್‌ನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಡಾ.ಅಮ್ರಿತಾ ಕೌರ್(30) ಎಂಬ ವೈದ್ಯೆ ತಮ್ಮ ದ್ವಿಚಕ್ರವಾಹನದಲ್ಲಿ ತೆರಳುತಿದ್ದಾಗ ಏಕಾಏಕಿ ಆ್ಯಸಿಡ್ ದಾಳಿ ನಡೆಸಿ, ಆಕೆಯಲ್ಲಿದ್ದ ಪರ್ಸ್‌ನ್ನು ಕಸಿದು ಪರಾರಿಯಾಗಿದ್ದರು.
Advertisement