'ರೈಲ್ವೆ ಇಲಾಖೆಯಲ್ಲಿ ಖಾಸಗೀಕರಣವಿಲ್ಲ'

ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನವಾದ ಡಿ.25ರ ದಿನವನ್ನು ಗುಡ್ ಗವರ್ನೆನ್ಸ್ ಡೆ...
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ವಾರಣಾಸಿ: ಯಾವುದೇ ಕಾರಣಕ್ಕೂ ರೈಲ್ವೆ ಇಲಾಖೆಯಲ್ಲಿ ಖಾಸಗೀಕರಣಕ್ಕೆ ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನವಾದ ಡಿ.25ರ ದಿನವನ್ನು ಗುಡ್ ಗವರ್ನೆನ್ಸ್ ಡೆ ಎಂದು ಆಚರಿಸಲು ಮುಂದಾಗಿರುವ ಪ್ರಧಾನಿ ಮೋದಿ, ಜನತೆಗೆ ಮುಕ್ತವಾದ ಹಾಗೂ ಜವಾಬ್ದಾರಿಯುತವಾದ ಸರ್ಕಾರ ಒದಗಿಸಲು ನನ್ನ ಸರ್ಕಾರ ಬದ್ಧ ಎಂದು ಹೇಳಿದ್ದಾರೆ.

ವಾರಣಾಸಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರೈಲ್ವೆ ಇಲಾಖೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡುವುದಿಲ್ಲ ಎಂದು ತಿಳಿದರು. ಪ್ರಸ್ತುತ ರೈಲ್ವೆ ಇಲಾಖೆಯು ಹಣಕಾಸಿನ ಕೊರತೆ ಎದುರಿಸುತ್ತಿದೆ. ಆದರೆ ಖಾಸಗೀಕರಣ ಮಾಡುವುದಿಲ್ಲ.

 ರೈಲ್ವೆ ಇಲಾಖೆಯ ಆರ್ಥಿಕ ಸುಧಾರಣೆಗೆ ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಅಲ್ಲದೇ ರೈಲ್ವೆ ಇಲಾಖೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಉತ್ತಮ ತಂತ್ರಜ್ಞಾಗಳನ್ನು ಅಳವಡಿಸಿಕೊಳ್ಳಬೇಕಿದೆ. ರೈಲ್ವೆ ಇಲಾಖೆ ಅಭಿವೃದ್ಧಿಯಾದರೆ ಇಡೀ ದೇಶವೇ ಅಭಿವೃದ್ಧಿಯಾದಂತೆ ಎಂದು ಮೋದಿ ವಿವರಿಸಿದರು.

ಅತಿ ಶೀಘ್ರದಲ್ಲಿ ದೇಶದ ನಾಲ್ಕು ಕಡೆಗಳಲ್ಲಿ ರೈಲ್ವೆ ಸಿಟಿ ಸ್ಥಾಪನೆ ಮಾಡಲಾಗುತ್ತದೆ. ಈ ಮೂಲಕ ರೈಲ್ವೆ ಇಲಾಖೆ ಅಭಿವೃದ್ಧಿಗೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗವುದು ಎಂದು ತಿಳಿದರು.

21ನೇ ಶತಮಾನವೂ ಜ್ಞಾನಬಂಡಾರದ ಶತಮಾನವಾಗಿದೆ. ನಾವೆಲ್ಲರು ದೇಶಕ್ಕಾಗಿ ಏನನ್ನಾದರು ಸಮರ್ಪಿಸುವವರಂತಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಈ ವೇಳೆ ನಮ್ಮ ಶಿಕ್ಷಣ ವ್ಯವಸ್ಥೆಯ ಕುರಿತು ಮಾತನಾಡಿದ ಮೋದಿ, ದೇಶದ ಶಿಕ್ಷಣ ವ್ಯವಸ್ಥೆಯೂ ರೊಬೋಗಳನ್ನು ಉತ್ಪಾದಿಸುವುದಕ್ಕಿಂತ, ವ್ಯಕ್ತಿತ್ವ ಬೆಳವಣಿಗೆ ಮಾಡುವಂತ ವ್ಯವಸ್ಥೆ ನಿರ್ಮಾಣವಾಗಬೇಕು ಎಂದರು.

ಉತ್ತಮ ಶಿಕ್ಷಕನಿಂದ ಮಾತ್ರ ಉತ್ತಮ ಶಿಕ್ಷಣ ಸಾಧ್ಯ. ಇಡೀ ವಿಶ್ವಕ್ಕೆ ಉತ್ತಮ ಶಿಕ್ಷಕರ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವು ಉತ್ತಮ ಗುಣಮಟ್ಟದ ಶಿಕ್ಷಕರನ್ನು ಹೊಂದಿದ್ದೇವೆಯೇ ಎಂಬುದನ್ನು ಯೋಚಿಸಬೇಕಿದೆ.

ಇಡೀ ವಿಶ್ವವೇ ನಮ್ಮ ದೇಶದತ್ತ ಮುಖಮಾಡಿ ನೋಡುತ್ತಿದೆ. ಉತ್ತಮ ಶಿಕ್ಷಣ ಪಡೆಯಲು ಹಲವು ವಿದೇಶಿಗರು ವಾರಾಣಾಸಿಗೆ ಆಗಮಿಸುತ್ತಿದ್ದು, ಇದು ಶಿಕ್ಷಣ ಕಾಶಿಯಾಗಿ ಹೊರಹೊಮ್ಮುತ್ತಿದೆ ಎಂದು ಶ್ಲಾಘಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com