ಅಸರಾಮ್ ವಿರುದ್ಧ ದೂರು ದಾಖಲಿಸಿದ್ದ ಮಹಿಳೆ ನಾಪತ್ತೆ

ಸ್ವಯಂ ಘೋಷಿತ ದೇವಮಾನವ ಅಸಾರಾಮ್ ಬಾಪು ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ...
ಅಸಾರಾಮ್ ಬಾಪು
ಅಸಾರಾಮ್ ಬಾಪು

ಅಹಮದಾಬಾದ್: ಸ್ವಯಂ ಘೋಷಿತ ದೇವಮಾನವ ಅಸಾರಾಮ್ ಬಾಪು ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದ ಮಹಿಳೆ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಒಂದು ವಾರದಿಂದ ಅಸಾರಾಮ್ ವಿರುದ್ಧ ಪ್ರಕರಣ ದಾಖಲಿಸಿದ್ದ 33 ವರ್ಷದ ಮಹಿಳೆ ಮತ್ತು ಆಕೆಯ ಮಗ, ಪತಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ದಾಖಲಿಸಿದ್ದ ಮಹಿಳೆ ಮತ್ತು ಆಕೆಯ ಕುಟಂಬಕ್ಕೆ ಪೊಲೀಸ್ ಭದ್ರತೆ ನೀಡಲಾಗಿತ್ತು. ಅವರ ಭದ್ರತೆಗಾಗಿ ನಾಲ್ವರು ಪೊಲೀಸರ ನೇಮಿಸಲಾಗಿತ್ತು. ಡಿಸೆಂಬರ್ 14ರಂದು ಮಹಿಳೆ ತಮ್ಮ ಸಂಬಂಧಿಕರ ಮದುವೆ ಅಮ್ರೋಲಿಯಲ್ಲಿ ಇದ್ದು ಅಲ್ಲಿಗೆ ತೆರಳುವುದಾಗಿ ತಿಳಿಸಿದ್ದರು. ಅಲ್ಲದೇ ಅಲ್ಲಿಗೆ ಪೊಲೀಸ್ ಭದ್ರತೆ ನಿರಾಕರಸಿದ್ದರು ಎಂದು ಸಬ್‌ಇನ್ಸ್‌ಪೆಕ್ಟರ್ ಎನ್‌ಎಂ ಅಹಿರ್ ಹೇಳಿದ್ದಾರೆ.

ವಿವಾಹ ನೆಪದಲ್ಲಿ ಊರಿಗೆ ತೆರಳಿದ್ದ ಕುಟುಂಬ ಇಲ್ಲಿಯವರೆಗೆ ವಾಪಸ್ಸಾಗಿಲ್ಲ. ಈ ಸಂಬಂಧ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ತನಿಖೆ ವೇಳೆ ಆ ದಿನ ಸಂಬಂಧಿಕರ ಮದುವೆ ಇರಲಿಲ್ಲ ಎಂಬ ವಿಷಯ ಬೆಳಕಿಗೆ ಬಂದಿದೆ. ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com