
ವಿಜಯವಾಡ: ವಿಜಯವಾಡದಲ್ಲಿ ಅಕ್ರಮವಾಗಿ ಬಂದೂಕುಗಳನ್ನು ತಯಾರಿಸುತ್ತಿದ್ದ ಕಾರ್ಖಾನೆಯ ಮೇಲೆ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಧೂಕುಗಳನ್ನು ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಕಳೆದ ವಾರ ಅನುಮಾನಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಶರತ್ ರೆಡ್ಡಿ ಎಂಬಾತನನ್ನು ಗೋಧಾವರಿ ಪೊಲೀಸರು ಬಂಧಿಸಿದ್ದರು. ಶರತ್ ರೆಡ್ಡಿ, ಬಿ ಟೆಕ್ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಯಾಗಿದ್ದು, ಈತ ನಕ್ಸಲರಿಗೆ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ತಿಳಿದು ಬಂತು.
ಈತ ನೀಡಿದ ಮಾಹಿತಿ ಮೇರೆಗೆ ವಿಜಯವಾಡದ ಆಟೋ ನಗರದಲ್ಲಿರುವ ಲಕ್ಷ್ಮೀ ದುರ್ಗಾ ಇಂಜಿನೀಯರಿಂಗ್ ವರ್ಕ್ಸ್ ಕಾರ್ಖಾನೆ ಮೇಲೆ ಏಳೂರು ಪೊಲೀಸರು ದಾಳಿ ನಡೆಸಿದರು. ಈ ವೇಳೆ ಕಾರ್ಖಾನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಧೂಕು, ಮದ್ದುಗುಂಡು ಸೇರಿದಂತೆ ಬಿಡಿ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಖಾನೆಯ ಕೆಲಸದಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಏಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Advertisement