ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಮೂಳೆ ರಾಶಿ ಪತ್ತೆ!

ಮೂಳೆಗಳನ್ನು ಯಾವ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ, ಯಾವ ಪ್ರಾಣಿಗಳ ಮೂಳೆಗಳು...
ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಮೂಳೆ ರಾಶಿಗಳು
ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಮೂಳೆ ರಾಶಿಗಳು

ಮೊರದಾಬಾದ್: ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ರಾಶಿಗಟ್ಟಲೆ ಮೂಳೆಗಳನ್ನು ಆಹಾರ ಮತ್ತು ಸರಬರಾಜು ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿರುವುದು ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ.

ಮೂಳೆಗಳ ಬಳಕೆಯಾಗುತ್ತಿದೆ ಎಂಬ ಆರೋಪದ ಮೇಲೆ ಸೋಮವಾರ ಮೊರದಾಬಾದಿನ ಆಹಾರ ಮತ್ತು ಸರಬರಾಜು ಇಲಾಖೆ ಅಧಿಕಾರಿಗಳು, ಬಿಸ್ಕೆಟ್ ಮತ್ತು ರಸ್ಕ್‌ ತಯಾರಿಕಾ ಕಾರ್ಖಾನೆ ಮೇಲೆ ದಿಢೀರ್ ದಾಳಿ ನಡೆಸಿದರು. ಈ ಸಂದರ್ಭ ಅಲ್ಲಿ ಅಪಾರ ಪ್ರಮಾಣದ ಪ್ರಾಣಿ ಮೂಳೆಗಳಿರುವುದು ಪತ್ತೆಯಾಗಿದೆ.

ಅಲ್ಲದೇ ಕಾರ್ಖಾನೆಯಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಂಡಿರುವುದು ಸಹ ದಾಳಿಯ ವೇಳೆ ತಿಳಿದುಬಂದಿದೆ. ಹಲವು ವರ್ಷಗಳಿಂದ ಈ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದ್ದು, ಆಹಾರ ತಯಾರಿಕಾ ನಿಯಮಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸದೆ ಇರುವ ಮಾಹಿತಿ ಬಹಿರಂಗಗೊಂಡಿದೆ.

ಈ ಕುರಿತು ಪ್ರಕರಣ ದಾಖಲಾಗಿದ್ದು, ಮೂಳೆಗಳನ್ನು ಯಾವ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ, ಯಾವ ಪ್ರಾಣಿಗಳ ಮೂಳೆಗಳು ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ.

ಒಟ್ಟಿನಲ್ಲಿ ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಮೂಳೆಗಳ ರಾಶಿಗಳು ಪತ್ತೆಯಾಗಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com