
ಲಕ್ನೋ: ಇತ್ತೀಚೆಗೆ ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಕಂಡಿರುವ ಅಮೀರ್‌ಖಾನ್ ನಟನೆಯ ಪಿಕೆ ಚಿತ್ರಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯೂ ನೀಡಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ಪಿಕೆ ಚಿತ್ರದಲ್ಲಿ ಹಿಂದು ಧರ್ಮವನ್ನು ಹಾಗೂ ದೇವತೆಗಳನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಲಾಗಿದೆ ಎಂದು ವಿಶ್ವಹಿಂದೂ ಪರಿಷತ್, ಬಜರಂಗ ದಳ, ಶಿವಸೇನೆ ಸೇರಿದಂತೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.
ಉತ್ತರ ಭಾರತದ ಹಲವೆಡೆ ಪಿಕೆ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಸಿನಿಮಾ ಮಂದಿಗಳಿಗೆ ನುಗ್ಗಿದ ಕೆಲ ಹಿಂದೂಪರ ಸಂಘಟನೆಯ ಕಾರ್ಯಕರ್ತರು, ಪಿಕೆ ಚಿತ್ರದ ಪೋಸ್ಟರ್‌ಗಳಿಗೆ ಬೆಂಕಿ ಹಚ್ಚಿದರು.
ನಿನ್ನೆ ದೆಹಲಿಯಲ್ಲಿನ ಗಂಗಾ ಸಿನಿಮಾ ಮಂದಿರದಲ್ಲಿ ಬಜರಂಗ ದಳ ಕಾರ್ಯಕರ್ತರು, ಥಿಯೇಟರ್‌ನ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿ ಖಂಡನೆ ವ್ಯಕ್ತಪಡಿಸಿದ್ದರು.
ಈ ಮಧ್ಯೆ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಉತ್ತರ ಪ್ರದೇಶದಲ್ಲಿ ಪಿಕೆ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ, ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಅಮೀರ್‌ಖಾನ್‌ಗೆ ಕೊಂಚ ಸಂತಸ ತಂದಿದೆ. ಇದೇ ವೇಳೆ ಸುದ್ದಿಗೊರರೊಂದಿಗೆ ಮಾತನಾಡಿದ ಅಖಿಲೇಶ್, ಇದೊಂದು ಉತ್ತಮ ಚಿತ್ರವಾಗಿದ್ದು, ಜನತೆಗೆ ಇದು ಉತ್ತಮ ಸಂದೇಶ ನೀಡುತ್ತದೆ ಎಂದು ಶ್ಲಾಘಿಸಿದ್ದಾರೆ.
Advertisement