

ನವದೆಹಲಿ: ರಕ್ಷಣಾ ಖರೀದಿ ನೀತಿಯನ್ನು ಕೇಂದ್ರ ಸರ್ಕಾರ ಬುಧವಾರ ಅಂತಿಮ ಪಡಿಸಿದೆ. ಅದಕ್ಕೆ ಪೂರಕವಾಗಿ ಟಟ್ರಾ ಟ್ರಕ್‌ಗೆ ಬಿಡಿ ಭಾಗಗಳನ್ನು ಪೂರೈಕೆ ಮಾಡದಂತೆ ಬೆಮೆಲ್ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ.
ಆದರೆ, ತನ್ನ ಬ್ರಿಟನ್ ಪಾಲುದಾರ ಕಂಪನಿ ಜತೆ ವಹಿವಾಟು ನಡೆಸದಂತೆ ಕೇಂದ್ರ ಸರ್ಕಾರ ತಾಕೀತು ಮಾಡಿದೆ. ಇದರ ಜತೆಗೆ ಹೊಸ ನೀತಿಯಲ್ಲಿ ಮಧ್ಯ ವರ್ತಿಗಳಿಗೆ ಅವಕಾಶ ನೀಡಲಾಗಿದೆ.
ಆದರೆ ರಕ್ಷಣಾ ಇಲಾಖೆಯ ಸಿಬ್ಬಂದಿ ಮಧ್ಯವರ್ತಿಗಳಾಗಿ ಕೆಲಸ ಮಾಡುವುದಕ್ಕೆ ಅವಕಾಶ ಕೊಡಲಾಗುವುದಿಲ್ಲ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.
ಪರಿಕ್ಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೊಸ ನೀತಿಗೆ ಒಪ್ಪಿಗೆ ಸೂಚಿಸಲಾಗಿದೆ.