
ನವದೆಹಲಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಇಸ್ರೇಲ್ ಪ್ರವಾಸ ಕೈಗೊಂಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್‌ಯಾಹುರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿಯಲ್ಲಿ ಉಭಯ ದೇಶಗಳ ಭದ್ರತೆ ಕುರಿತ ಒಪ್ಪಂದಗಳಿಗೆ ರಾಜನಾಥ್ ಸಹಿಹಾಕುವ ಸಾಧ್ಯತೆಗಳಿವೆ.
ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್ ಪ್ರವಾಸದಲ್ಲಿದ್ದಾಗ ಇಸ್ರೇಲ್ ಪ್ರಧಾನಿ ನೆತನ್‌ಯಾಹುರೊಂದಿಗೆ ಮಾತುಕತೆ ನಡೆಸಿದ್ದರು. ಈ ಭೇಟಿಯ ಒಂದು ತಿಂಗಳ ಬಳಿಕ ಇದೀಗ ರಾಜನಾಥ್ ನೆತನ್‌ಯಾಹುರನ್ನು ಭೇಟಿ ಮಾಡುತ್ತಿದ್ದಾರೆ.
ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೋಸಫ್ ಕೊಹೆನ್ ಕಳೆದ ತಿಂಗಳು ಸಚಿವ ರಾಜನಾಥ್ ಸಿಂಗ್ ಅವರನ್ನು ಹಾಗೂ ಭಾರತೀಯ ಸವರ್ತಿ ಅಜಿತ್ ದೊವಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
Advertisement