

ನವದೆಹಲಿ: 2010ರಲ್ಲಿ ಕೇಂದ್ರ ಸರ್ಕಾರ ಕೈಗೊಂಡಿದ್ದ ಜಾತಿ ಆಧಾರಿತ ಜನಗಣತಿ ಒಂದು ಸಮಯೋಚಿತ ನಿರ್ಧಾರ ಎಂದು ಸುಪ್ರೀಂಕೋರ್ಟ್ ಹೇಳಿದೆ.
ತನ್ನ ಜನಪರ ಯೋಜನೆಗಳನ್ನು ಜಾರಿಗೊಳಿಸಲು ಯಾವುದೇ ಮಾದರಿಯ ಗಣತಿಯನ್ನು ಕೇಂದ್ರ ಸರ್ಕಾರ ಕೈಗೊಳ್ಳಬಹುದು. ಇದರಿಂದ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಮೀಸಲು ನಿಗದಿಗೆ ಹೆಚ್ಚು ಸಹಾಯಕ ಎಂದು ನ್ಯಾಯಾಲಯ ಹೇಳಿದೆ. 2010ರಲ್ಲಿ ಅಂದಿನ ಕೇಂದ್ರ ಸರ್ಕಾರ ಜಾತಿ ಆಧಾರಿತ ಜನಗಣತಿ ನಡೆಸುವ ನಿರ್ಧಾರ ಕೈಗೊಂಡಿತ್ತು. ಇದರ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರ ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ತೀರ್ಪು ನೀಡಿತ್ತು. ಹೈಕೋರ್ಟ್‌ನ ಈ ನಿರ್ಧಾರವನ್ನು ಕೇಂದ್ರ ಸರ್ಕಾರ ಸುಪ್ರೀಂನಲ್ಲಿ ಪ್ರಶ್ನಿಸಿತ್ತು.