
ನವದೆಹಲಿ: 2ಜಿ ಹಗರಣ ಬೆಳಕಿಗೆ ಬರುತ್ತಿದ್ದಂತೆ ಯುಪಿಎ ಸರ್ಕಾರ 2ಜಿ ಪರವಾನಗಿಗಳನ್ನು ರದ್ದುಗೊಳಿಸಬೇಕಿತ್ತು ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿದ್ದಾರೆ.
ಯುಪಿಎ ಅಧಿಕಾರದಲ್ಲಿದ್ದಾಗಲೇ 2ಜಿ ಲೈಸೆನ್ಸ್‌ಗಳನ್ನು ರದ್ದುಗೊಳಿಸಿದ್ದರೆ, ಕಾಂಗ್ರೆಸ್ ಪಕ್ಷದ ಮೇಲೆ ಆರೋಪಗಳು ಕೇಳಿ ಬರುತ್ತಿರಲಿಲ್ಲ ಎಂದು ಚಿದಂಬರಂ ತಿಳಿಸಿದ್ದಾರೆ.
ಹಗರಣ ಬೆಳಕಿಗೆ ಬರುತ್ತಿದ್ದಂತೆ ಎಲ್ಲಾ 2ಜಿ ಪರವಾನಗಿಯನ್ನು ರದ್ದುಗೊಳಿಸಿದ್ದರೆ, ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗುತ್ತಿರಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಸೋಲುವುದಕ್ಕೆ ಇದು ಒಂದು ಕಾರಣವಾಗಿ ಉಳಿದಿದೆ ಎಂದು ಅವರು ವಿಷಾಧಿಸಿದ್ದಾರೆ.
ಮೊದಲು ಬಂದವರಿಗೆ ಆದ್ಯತೆ ಎಂಬ ನಿಯಮವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರಸ್ಕರಿಸಬೇಕಿತ್ತು. ಬೇರೆ ನಿಯಮಗಳ ಪ್ರಕಾರ ಪರವಾನಗಿ ನೀಡಬಹುದಾಗಿತ್ತು. ಕೋರ್ಟ್ ಆದೇಶ ಬರುವ ಮುನ್ನವೇ 2ಜಿ ಪರವಾನಗಿ ರದ್ದುಗೊಳಿಸಿದಿದ್ದರೆ, ಪಕ್ಷದ ಮೇಲೆ ಹಗರಣದ ಆರೋಪ ಕೇಳಿಬರುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.
Advertisement