

ನವದೆಹಲಿ: ಇನ್ನು ಮುಂದೆ ಪಾಸ್‌ಪೋರ್ಟ್ ಪಡೆಯಬೇಕೆಂದರೆ ಆಧಾರ್ ಸಂಖ್ಯೆ ಕಡ್ಡಾಯವಾಗುವ ಸಾಧ್ಯತೆ ಇದೆ.
ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪಾಸ್ಪೋರ್ಟ್ಗೆ ಆಧಾರ್ ಕಡ್ಡಾಯಗೊಳಿಸಬೇಕು ಎಂಬ ಪ್ರಸ್ತಾವನೆ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.
ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಬೇಕಾದರೆ, ಆಧಾರ್ ಸಂಖ್ಯೆ ನಮೂದಿಸಬೇಕಿದ್ದ್ದು, ಪೊಲೀಸ್ ಪರೀಶೀಲನೆ ಸಂದರ್ಭದಲ್ಲಿ ಆಧಾರ್ ಕಾರ್ಡ್ ನೀಡುವುದು ಕಡ್ಡಾಯ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ.
ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಸೇರಿದಂತೆ ಇತರೆ ಯಾವುದೇ ಪ್ರಕರಣಗಳು ದಾಖಲಾಗಿರಬಾರದು. ಈ ಹಿನ್ನೆಲೆಯಲ್ಲಿ ಪಾಸ್ ಪೋರ್ಟ್‌ಗೆ ಅರ್ಜಿ ಸಲ್ಲಿಸುವ ಕ್ರಿಮಿನಲ್ ವ್ಯಕ್ತಿಗಳ ಪತ್ತೆಗಾಗಿ ಹಾಗೂ ಮುಂಜಾಗ್ರಜೆ ಕ್ರಮಕ್ಕಾಗಿ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸುವ ಚಿಂತನೆ ನಡೆಸಲಾಗಿದೆ.