
ನವದೆಹಲಿ: 'ನರೇಂದ್ರ ಮೋದಿ ಅಲೆ'ಯಲ್ಲಿ ತೆಲುತ್ತಿರುವ ಬಿಜೆಪಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ತನ್ನ ಪಾರುಪತ್ಯ ಸಾಧಿಸುವ ಸಾಧ್ಯತೆ ಇದೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.
ಸಮೀಕ್ಷೆಗಳ ಪ್ರಕಾರ, 70 ಸ್ಥಾನಗಳನ್ನು ಹೊಂದಿರುವ ದೆಹಲಿ ವಿಧಾಸಭೆಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಅಲ್ಲದೆ ಬಿಜೆಪಿ ಒಟ್ಟಾರೆ ಶೇ.38ರಷ್ಟು ಮತ ಗಳಿಸಲಿದೆ.
ಬಿಜೆಪಿ ಪ್ರತಿಸ್ಪರ್ಧಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಈ ಬಾರಿ ಅತಿ ಕಡಿಮೆ ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಮತ್ತು ಕಾಂಗ್ರೆಸ್ ಸಂಪೂರ್ಣವಾಗಿ ನೆಲ ಕಚ್ಚಲಿದೆ ಎಂದಿದೆ ಸಮೀಕ್ಷೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆದ್ದಿದ್ದ ಆಮ್ ಆದ್ಮಿ ಪಕ್ಷ, ಈ ಬಾರಿ ಕೇವಲು 18 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ. ಇನ್ನು ಈ ಚುನಾವಣಾ ಸಮೀಕ್ಷೆಗಳನ್ನೇ ನಂಬುವುದಾದರೆ, ಕಾಂಗ್ರೆಸ್ ಕಳೆದ ಬಾರಿಗಿಂತ ಈ ಬಾರಿ ಕಳಪೆ ಪ್ರದರ್ಶನ ನೀಡಲಿದ್ದು, ಕೇವಲು 5 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆ. 2013ರಲ್ಲಿ ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.
Advertisement