ಯಾವುದೇ ಷರತ್ತಿಲ್ಲದೆ ಐವರು ಮೀನುಗಾರರ ಬಿಡುಗಡೆ: ಗಣೇಶನ್

ಭಾರತೀಯ ಮೀನುಗಾರರ(ಸಾಂದರ್ಭಿಕ ಚಿತ್ರ)
ಭಾರತೀಯ ಮೀನುಗಾರರ(ಸಾಂದರ್ಭಿಕ ಚಿತ್ರ)

ನವದೆಹಲಿ: ಶ್ರೀಲಂಕಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ಐವರು ಮೀನುಗಾರರನ್ನು ಯಾವುದೇ ಷರತ್ತುಗಳಿಲ್ಲದೆ ಬಿಡುಗಡೆ ಮಾಡಲಾಗುವುದು ಎಂದು ಶ್ರೀಲಂಕಾ ಸಚಿವ ಗಣೇಶನ್ ಅವರು ಬುಧವಾರ ಹೇಳಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರೊಂದಿಗೆ ದೂರವಾಣಿ ಕರೆ ಮಾಡಿದ್ದ ಬೆನ್ನಲ್ಲೇ ರಾಜಪಕ್ಸೆ ಅವರು ಮೀನುಗಾರರ ಬಿಡುಗಡೆಗೆ ಸಮ್ಮತಿಸಿದ್ದರು. ಈ ಬಗ್ಗೆ ಮಾಹಿತಿ ನೀಡಿರುವ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಉಪ ಸಚಿವ ಗಣೇಶನ್ ಅವರು, ಮೀನುಗಾರರ ಬಿಡುಗಡೆಗೆ ಸಮ್ಮತಿ ಸೂಚಿಸಿದ್ದು, ಯಾವುದೇ ಷರತ್ತುಗಳಿಲ್ಲದೆ ಐವರು ಮೀನುಗಾರರನ್ನು ಇನ್ನು 2-3 ದಿನಗಳೊಳಗೆ ಬಿಡುಗಡೆ ಮಾಡಲಾಗುವುದು ಎಂದರು.

2011ರಲ್ಲಿ ರಾಮೇಶ್ವರದಾಚೆ ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿದ್ದ 5 ಮೀನುಗಾರರು ಲಂಕಾ ನೌಕಾ ಪಡೆಗೆ ಸಿಕ್ಕಿಬಿದ್ದಿದ್ದರು. ಅಕ್ರಮವಾಗಿ ಮಾದಕ ದ್ರವ್ಯ ಸಾಗಣೆ ಮತ್ತು ಸಮುದ್ರ ಗಡಿ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕೊಲಂಬೋ ಹೈಕೋರ್ಟ್ ಗಲ್ಲು ಶಿಕ್ಷೆ ಕೂಡ ವಿಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com