ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿಲ್ಲ: ಇಂಡಿಯನ್ ಆಯಿಲ್

ಪೆಟ್ರೋಲ್
ಪೆಟ್ರೋಲ್

ನವದೆಹಲಿ: ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಇಳಿಕೆ ಮಾಡಿದ್ದ ಕೇಂದ್ರ ಸರ್ಕಾರ ದಿಢೀರ್ ದರ ಏರಿಕೆ ಮಾಡಿದೆ ಎಂಬ ಸುದ್ದಿ ಗುರುವಾರ ಮಧ್ಯಾಹ್ನ ಹರಿದಾಡಿತ್ತು.

ಅಬಕಾರಿ ಸುಂಕವನ್ನು ಸರಿದೂಗಿಸಿಕೊಳ್ಳಲು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್‌ಗೆ ರು. 1.50 ಏರಿಕೆ ಮಾಡಿದೆ ಎಂಬ ಸುದ್ದಿ ಸುಳ್ಳಾಗಿದೆ. ತೈಲ ಬೆಲೆಯಲ್ಲಿ ಯಾವುದೇ ಏರಿಕೆ ಮಾಡಿಲ್ಲ ಇದೆಲ್ಲ ಸುಳ್ಳು ಸುದ್ದಿ ಎಂದು ಇಂಡಿಯನ್ ಆಯಿಲ್ ಅಧ್ಯಕ್ಷ ಪಿ. ಅಶೋಕ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಯುತ್ತಿರುವುದರಿಂದ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 1 ರು ಇಳಿಕೆ ಮಾಡಲಾಗುತ್ತದೆ ಎಂದು ಮಾಹಿತಿ ಇತ್ತು. ಆದರೆ ಅದರ ಬೆನ್ನಿಗೆ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಲಾಗಿದೆ ಎಂಬ ಸುದ್ದಿ ಗ್ರಾಹಕರಿಗೆ ಶಾಕ್ ನೀಡಿತ್ತು. ಸದ್ಯ ದರ ಏರಿಕೆ ಮಾಡಿಲ್ಲ ಎನ್ನುವ ಮೂಲಕ ಗ್ರಾಹಕನು ನಿರಾಳವಾಗಿದ್ದಾನೆ.

ಸದ್ಯ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 70.45 ರುಪಾಯಿ ಇದ್ದು, ಡೀಸೆಲ್ ದರ 57.94 ರು ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com