

ಜಮ್ಮುಕಾಶ್ಮೀರ: ಪಾಕಿಸ್ತಾನದ ಸೇನೆ ಮತ್ತೆ ಭಾರತದ ಮೇಲೆ ಅಪ್ರಚೋದಿತ ಗುಂಡಿನ ದಾಲಿ ನಡೆಸಿದೆ.
ಪದೇ ಪದೇ ಗಡಿ ನಿಯಮ ಉಲ್ಲಂಘನೆ ಮಾಡುತ್ತಿರುವ ಪಾಕ್ ಸೇನೆ ಕಳೆದ ರಾತ್ರಿ ಜಮ್ಮು ಕಾಶ್ಮೀರದ ಸಾಂಬಾ ಗಡಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಬಿಎಸ್‌ಎಫ್ ಯೋಧರನ್ನು ಗುರಿಯಾಗಿಟ್ಟುಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಭಾರತದ ಸೇನೆ ಪ್ರತಿದಾಳಿ ನಡೆಸುತ್ತಿಲ್ಲ. ಆದರೆ ಘಟನೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.