ಪ್ರಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಪೃಥ್ವಿ-2 ಕ್ಷಿಪಣಿ
ಪೃಥ್ವಿ-2 ಕ್ಷಿಪಣಿ

ಬಾಲಸೋರ್/ಒಡಿಶಾ: ದೇಶೀಯವಾಗಿ ನಿರ್ಮಿಸಲ್ಪಟ್ಟಿರುವ ಅಣ್ವಸ್ತ್ರ ವಾಹಕ ಪೃಥ್ವಿ-2 ಕ್ಷಿಪಣಿಯ ಪರೀಕ್ಷಾ ಉಡಾವಣೆ ಶುಕ್ರವಾರ ಯಶಸ್ವಿಯಾಗಿದೆ.

ಭೂಮಿಯ ಮೇಲ್ಮೈಯಿಂದ ಮೇಲ್ಮೈಗೆ ಪ್ರಯೋಗಿಸಲ್ಪಡುವ ಕ್ಷಿಪಣಿ ಅತ್ಯಾಧುನಿಕ ವಿನೂತನ ತಂತ್ರಜ್ಞಾನವನ್ನು ಹೊಂದಿದ್ದು, 500ರಿಂದ 1,000 ಕಿ.ಲೋ ತೂಕದ ಅಣ್ವಸ್ತ್ರಗಳನ್ನು ಹೊತ್ತು ಸುಮಾರು 350 ಕಿ.ಮೀ ದೂರ ವ್ಯಾಪ್ತಿಯನ್ನು ಕ್ರಮಿಸಬಲ್ಲ ಸಾಮರ್ಥ್ಯ ಹೊಂದಿದ್ದು, ಇದನ್ನು ರಕ್ಷಣಾ ಇಲಾಖೆಯಲ್ಲಿ ಬಳಸಲಾಗುತ್ತಿದೆ.

ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್ ಶುಕ್ರವಾರ ಬೆಳಗ್ಗೆ 10.40ರ ಸುಮಾರಿಗೆ ಸಂಯುಕ್ತ ಪರೀಕ್ಷಾ ವಲಯದಲ್ಲಿನ 3ನೇ ಸಂಕೀರ್ಣದಿಂದ ಈ ಪರೀಕ್ಷಾರ್ಥ ಉಡಾವಣೆ ನಡೆಸಿತ್ತು. ಪೃಥ್ವಿ-2 ಕ್ಷಿಪಣಿ 350 ಕಿ.ಮೀ ದೂರವನ್ನು ಕ್ರಮಿಸುವಲ್ಲಿ ಯಶಸ್ವಿಯಾಗಿದೆ ಎಂದು ಐಟಿಆರ್ ಅಧ್ಯಕ್ಷ ಎಂ.ವಿ.ಕೆ.ವಿ ಪ್ರಸಾದ್ ಸುದ್ದಿವಾಹಿನಿಯೊಂದಕ್ಕೆ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com