ಮೊರಾದಾಬಾದ್‌ನಲ್ಲಿ ವ್ಯಾನ್‌ಗೆ ಟ್ರಕ್ ಡಿಕ್ಕಿ: 12 ಸಾವು, 4 ಗಾಯ
ಮೊರಾದಾಬಾದ್: ಉತ್ತರಪ್ರದೇಶದ ದಿಂಗಾರ್‌ಪುರ್-ಕುಂಡಾರ್ಕಿ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ವ್ಯಾನ್‌ಗೆ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಹಿಳೆಯರು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದಾರೆ.
ಹೆಚ್ಚಾಗಿ ಮಹಿಳೆಯರೇ ಪ್ರಯಾಣಿಸುತ್ತಿದ್ದ ವ್ಯಾನೊಂದು ಇಂದು ಬೆಳಗ್ಗೆ ದಿಂಗಾರ್‌ಪುರ್ ಕುಂಡಾರ್ಕಿಯಲ್ಲಿ ಟ್ರಕ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊರಾದಾಬಾದ್‌ನ ಬಡುರೈನಿಂದ ಬರೇಲಿಯಲ್ಲಿ ನಡೆಯುತ್ತಿದ್ದ ಸತ್ಸಂಗ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದು, ಮೃತರಲ್ಲಿ ಹೆಚ್ಚಿನವರು 30 ರಿಂದ 35 ವರ್ಷ ಪ್ರಾಯದ ಮಹಿಳೆಯರೇ ಆಗಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದರೆ.
ಅಪಘಾತ ಸಂಭವಿಸುತ್ತಿದ್ದಂತೆ ಅವಘಡಕ್ಕೆ ಕಾರಣವಾದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಕೂಡಲೇ ಬಂದಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ