ದೇಶ
ಲೈಂಗಿಕ ಕಿರುಕುಳ ನೀಡಿದ ಖಾಸಗಿ ಶಾಲೆಯ ಮಾಲಿಕ ಬಂಧನ
ಖಾಸಗಿ ಶಾಲೆಯ ಮಾಲಿಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ...
ಬರಹಂಪೊರ್: ಖಾಸಗಿ ಶಾಲೆಯ ಮಾಲಿಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಖಾಸಗಿ ಶಾಲೆ ನಡೆಸುತ್ತಿದ್ದ ವ್ಯಕ್ತಿ ಅದೇ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ನವೆಂಬರ್ 9ರಂದು ಮುರ್ಶಿರಾಬಾದ್ ಜಿಲ್ಲೆಯ ಖರ್ಗಾ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಿಗೆ ಶಾಲೆಯ ಮಾಲಿಕನ ವಿರುದ್ಧ ದೂರು ದಾಖಲಾಗಿತ್ತು.
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ, ಆರೋಪಿ ತಲೆಮರೆಸಿಕೊಂಡಿದ್ದನು. ತಪಾಸಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಯೊಳಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಮಾಲೀಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಸುಶಾಂತ ಕುಮಾರ್ ದೇ ಎಂದು ಗುರುತಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ