

ನವದೆಹಲಿ: ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಜನ್ಮದಿನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಂದಿರಾ ಗಾಂಧಿ ಅವರಿಗೆ ಗೌರವ ಸಲ್ಲಿಸಿದ್ದಾರೆ.
ನಮ್ಮ ದೇಶದ ಜನತೆಯೊಡಗೂಡಿ ಇಂದಿರಾ ಗಾಂಧಿ ಅವರಿಗೆ ನಮನ ಸಲ್ಲಿಸುತ್ತೇನೆ. ಈ ದಿನ ಇಂದಿರಾ ಗಾಂಧಿ ಅವರ ಜನುಮ ದಿನವಾಗಿದ್ದು, ಅವರ ಸಾಧನೆಗಳನ್ನು ಸ್ಮರಿಸೋಣ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇಂದು ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 97ನೇ ಜನ್ಮದಿನೋತ್ಸವ.