ತುರ್ತು ಪರಿಸ್ಥಿತಿ ಕಾನೂನು ರದ್ದತಿಗೆ ಕೇಂದ್ರ ಚಿಂತನೆ

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಾರಿಗೊಳಿಸಿದ್ದ ವಿಶೇಷ...
ತುರ್ತು ಪರಿಸ್ಥಿತಿ ಕಾನೂನು ರದ್ದತಿಗೆ ಕೇಂದ್ರ ಚಿಂತನೆ

ನವದೆಹಲಿ: ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಾರಿಗೊಳಿಸಿದ್ದ ವಿಶೇಷ ಕಾಯ್ದೆ ಸೇರಿದಂತೆ ಹಲವು ಕಾನೂನುಗಳನ್ನು ರದ್ದು ಪಡಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಇಂದಿರಾಗಾಂಧಿ ಅವರು ವಿಶೇಷ ಕಾಯ್ದೆಯನ್ನು ಜಾರಿಗೊಳಿಸಿದ್ದರು. ಈ ವಿಶೇಷ ಕಾಯ್ದೆ ಸೇರಿದಂತೆ ಹಲವು ಕಾನೂನುಗಳನ್ನು ರದ್ದುಪಡಿಸಲು ಕಾನೂನು ಆಯೋಗ ತನ್ನ 4ನೇ ವರದಿಯಲ್ಲಿ ಶಿಫಾರಸ್ಸು ಮಾಡಿದೆ.

ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಕಾನೂನು ರದ್ದುಗೊಳಿಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಚುನಾಯಿತ ಪ್ರತಿನಿಧಿಯೊಬ್ಬರು ಪ್ರಧಾನಿಯಾಗಿ ಆಯ್ಕೆಯಾಗುವುದನ್ನು ಪ್ರಶ್ನಿಸುವ ಸಾಮಾನ್ಯ ನಿಯಮಗಳನ್ನು ಈ ಕಾಯ್ದೆ ನಿಷ್ಕ್ರಿಯಗೊಳಿಸುತ್ತದೆ.

ತುರ್ತು ಪರಿಸ್ಥಿತಿ ಬಳಿಕ 37 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ಕಾಯ್ದೆಯನ್ನು ರದ್ದುಪಡಿಸಲು ಮುಂದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com