ಬುಖಾರಿ ಪುತ್ರನ ಪಟ್ಟಾಭಿಷೇಕಕ್ಕೆ ಕಾನೂನಿನ ಮಾನ್ಯತೆ ಇಲ್ಲ: ದೆಹಲಿ ಹೈಕೋರ್ಟ್

ಜಾಮಾ ಮಸೀದಿಯ ಶಾಹಿ ಇಮಾಮ್ ಸಯೀದ್ ಅಹ್ಮದ್ ಬುಖಾರ್ ತನ್ನ..
ಸಯೀದ್ ಅಹ್ಮದ್ ಬುಖಾರಿ
ಸಯೀದ್ ಅಹ್ಮದ್ ಬುಖಾರಿ

ನವದೆಹಲಿ: ಜಾಮಾ ಮಸೀದಿಯ ಶಾಹಿ ಇಮಾಮ್ ಸಯೀದ್ ಅಹ್ಮದ್ ಬುಖಾರಿ ತನ್ನ ಪುತ್ರನನ್ನು ದೆಹಲಿಯ ಉತ್ತರಾಧಿಕಾರಿಯಾಗಿ ನೇಮಕ ಮಾಡುವ ಸಮಾರಂಭಕ್ಕೆ ಕಾನೂನಿನ ಮಾನ್ಯತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಶುಕ್ರವಾರ ಹೇಳಿದೆ. ಅಲ್ಲದೆ ನಾಳೆ ನಡೆಯುವ ಸಮಾರಂಭಕ್ಕೆ ತಡೆ ನೀಡಲು ನಿರಾಕರಿಸಿದೆ.

ಬುಖಾರಿ ಪುತ್ರನ ಪಟ್ಟಾಭಿಷೇಕ ಸಮಾರಂಭದ ವಿರುದ್ಧ ಸಲ್ಲಿಸಲಾಗಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜಿ.ರೋಹಿಣಿ ಹಾಗೂ ನ್ಯಾಯಮೂರ್ತಿ ಆರ್.ಎಸ್.ಎಂಡ್ಲಾ ಅವರನ್ನೊಳಗೊಂಡ ಹೈಕೋರ್ಟ್ ಪೀಠ, ಆ ಕಾರ್ಯಕ್ರಮ ಕಾನೂನು ಬದ್ಧ ಅಲ್ಲ ಮತ್ತು ಅದಕ್ಕೆ ಯಾವುದೇ ವಿಶೇಷ ಮಾನ್ಯತೆ ನೀಡಬೇಕಾಗಿಲ್ಲ ಎಂದು ಹೇಳಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ವಕ್ಫ್ ಮಂಡಳಿಗೆ ನೋಟಿಸ್ ನೀಡಿರುವ ಕೋರ್ಟ್, ಉತ್ತರ ನೀಡುವಂತೆ ಸೂಚಿಸಿದೆ. ಅಲ್ಲದೆ ಇದುವರೆಗೂ ಬುಖಾರಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಏಕೆ? ಎಂದು ವಕ್ಫ್ ಮಂಡಳಿಯನ್ನು ಪ್ರಶ್ನಿಸಿದೆ.

ಬುಖಾರಿ ನವೆಂಬರ್‌ 22ರಂದು ತನ್ನ ಪುತ್ರನನ್ನು ಉತ್ತರಾಧಿಕಾರಿಯಾಗಿ ಪ್ರತಿಷ್ಠಾಪನೆ ಮಾಡಲಿರುವ ಸಮಾರಂಭದ ವಿರುದ್ಧ ಸಲ್ಲಿಸಲಾಗಿದ್ದ ಮೂರು ಅರ್ಜಿಗಳ ಬಗ್ಗೆ ಗುರುವಾರ ಇದೇ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಆಗ ಕೇಂದ್ರ ಸರಕಾರ ಹಾಗೂ ವಕ್ಫ್‌ ಬೋರ್ಡ್‌ ಸಲ್ಲಿಸಿದ ಹೇಳಿಕೆಯಲ್ಲಿ, ಬುಖಾರಿಗೆ ತಮ್ಮ ಪುತ್ರನನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲು ಕಾನೂನಿನಲ್ಲಿ ಯಾವುದೇ ಹಕ್ಕಿಲ್ಲ ಎಂದು ವಾದಿಸಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com