

ಶ್ರೀನಗರ: ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿ ಬಿಜೆಪಿಯ ಅಭ್ಯರ್ಥಿಯೇ ಆಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿರುವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ಮತ್ತು ರಾಮಬನ್‌ನಲ್ಲಿ ಸಾರ್ವಜನಿಕ ಸಭೆಯೊಂದನ್ನು ಉದ್ದಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ 44 ಗಿಂತ ಅಧಿಕ ಸೀಟುಗಳನ್ನು ಗೆಲುವ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಈ ಮಟ್ಟಿನ ಸೀಟುಗಳನ್ನು ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆ. ಹೀಗಾಗಿ ಜಮ್ಮು ಕಾಶ್ಮೀರದ ಮುಂದಿನ ಸಿಎಂ ನಮ್ಮ ಪಕ್ಷದವರೇ ಆಗಿರುತ್ತಾರೆ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ 60 ವರ್ಷಗಳಿಂದ ಚಾಲ್ತಿಯಲ್ಲಿರುವ ವಂಶಾಡಳಿತವನ್ನು ಟೀಕಿಸಿದ ಅವರು ಕಾಂಗ್ರೆಸ್‌ನ ಈ ದೀರ್ಘಕಾಲದ ಆಡಳಿತ ಕಾಶ್ಮೀರವನ್ನು ರೋಗಗ್ರಸ್ಥವನ್ನಾಗಿಸಿದೆ. ಸಾಮ್ರಾಜ್ಯಶಾಹಿ ಆಳ್ವಿಕೆಯನ್ನು ಕೊನೆಗೊಳಿಸಿ ಪ್ರಗತಿ ಮತ್ತು ಅಭಿವೃದ್ಧಿಯ ಆಳ್ವಿಕೆ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಅಮಿತ್ ಶಾ ಹೇಳಿದ್ದರು.
ಕಣಿವೆ ರಾಜ್ಯದಲ್ಲಿ 5 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ನವೆಂಬರ್ 25ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಬನಿಲಾಲ್ ಮತ್ತು ರಾಮ್‌ಬನ್‌ನಲ್ಲಿ ಮತದಾನ ನಡೆಯಲಿದೆ.