ಸಾಮೂಹಿಕ ಅತ್ಯಾಚಾರಕ್ಕೊಳಗಾದವಳ ಪತಿಗೆ ಬೆಂಕಿ ಹಚ್ಚಿದ ಪೊಲೀಸ್ ಇನ್ಸ್‌ಪೆಕ್ಟರ್

ಅತ್ಯಾಚಾರ ಆರೋಪವನ್ನು ದಾಖಲಿಸಿದ ಮಹಿಳೆಯ ಪತಿಯನ್ನು ಪೊಲೀಸ್ ಇನ್ಸ್‌ಪೆಕ್ಟರ್...
ಸಾಮೂಹಿಕ ಅತ್ಯಾಚಾರಕ್ಕೊಳಗಾದವಳ ಪತಿಗೆ ಬೆಂಕಿ ಹಚ್ಚಿದ ಪೊಲೀಸ್ ಇನ್ಸ್‌ಪೆಕ್ಟರ್

ಬಾಗ್ಪತ್: ಅತ್ಯಾಚಾರ ಆರೋಪವನ್ನು ದಾಖಲಿಸಿದ ಮಹಿಳೆಯ ಪತಿಯನ್ನು ಪೊಲೀಸ್ ಇನ್ಸ್‌ಪೆಕ್ಟರ್ ಜೀವಂತವಾಗಿ ದಹಿಸಿರುವ ಘಟನೆ ಬಡೌತ್‌ನಲ್ಲಿ ನಡೆದಿದೆ.

ಗಂಡ ಮನೆಯಲ್ಲಿ ಇಲ್ಲದ ವೇಳೆ, ಗಂಡನ ಸೋದರ ಸಂಬಧಿಯೊಬ್ಬ ತನ್ನ ನಾಲ್ಕು ಜನ ಸಹಚರರೊಂದಿಗೆ ಮನೆಗೆ ನುಗ್ಗಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಅತ್ಯಾಚಾರಕ್ಕೊಳಗಾದ ಮಹಿಳೆ ಮರುದಿನ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾಳೆ. ಪ್ರಕರಣದ ವಿಚಾರಣೆಗಾಗಿ ಮನೆಗೆ ಬಂದ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರ ಮೇಲೆ ದಾಖಲಿಸಿರುವ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಇದಕ್ಕೆ ಮಹಿಳೆ ನಿರಾಕರಿಸಿದಾಗ, ಆಕ್ರೋಶಗೊಂಡ ಪೊಲೀಸ್ ಇನ್ಸ್‌ಪೆಕ್ಟರ್ ಆಕೆಯ ಪತಿಗೆ ಜೀವಂತವಾಗಿ ಬೆಂಕಿ ಹಚ್ಚಿದ್ದಾನೆ. ಶೇ.50 ರಷ್ಟು ದೇಹದ ಭಾಗ ಸುಟ್ಟಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಹಿಳೆಯ ಆರೋಪವನ್ನು ಇನ್ಸ್‌ಪೆಕ್ಟರ್ ತಳ್ಳಿ ಹಾಕಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com