ಇಂಡೋ-ಚೀನಾ ಬಿಕ್ಕಟ್ಟು: ಪಿಎಂಒ ವಿಶೇಷ ಪ್ರತಿನಿಧಿಯಾಗಿ ಅಜಿತ್ ದೋವಲ್ ನೇಮಕ

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್ ದೋವಲ್‌ರನ್ನು ಪ್ರಧಾನ ಮಂತ್ರಿಗಳ ಕಾರ್ಯಾಲಯದ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (ಸಂಗ್ರಹ ಚಿತ್ರ)
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (ಸಂಗ್ರಹ ಚಿತ್ರ)

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್ ದೋವಲ್‌ರನ್ನು ಪ್ರಧಾನ ಮಂತ್ರಿಗಳ ಕಾರ್ಯಾಲಯದ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ.

ಭಾರತ ಮತ್ತು ಚೀನಾ ದೇಶಗಳ ನಡುವಿನ ಗಡಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳ ಕಾರ್ಯಾಲಯ ಮಹತ್ವದ ನಿರ್ಣಯ ಕೈಗೊಂಡಿದ್ದು, ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳ ಕಾರ್ಯಾಲಯದ ವಿಶೇಷ ರಾಯಭಾರಿಯಾಗಿ ಅಜಿತ್ ದೋವಲ್‌ರನ್ನು ಸೋಮವಾರ ನೇಮಕ ಮಾಡಲಾಗಿದೆ.

ಪ್ರಸ್ತುತ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್ ದೋವಲ್ ಅವರು, ಈ ಹಿಂದೆ ಭಾರತ ಮತ್ತು ಚೀನಾ ದೇಶಗಳ ಗಡಿಯಲ್ಲಿ ಬಿಕ್ಕಟ್ಟು ಏರ್ಪಟ್ಟಾಗ ಕೇಂದ್ರ ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡಿದ್ದರು.

ವಿಶ್ವದ ಬಲಾಢ್ಯ ಸೇನೆ ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕಿಂತ ಮೇಲಿನ ಸ್ಥಾನದಲ್ಲಿರುವ ಚೀನಾ, ತನ್ನ ಕೆಂಪು ಸೇನೆಯ ಮೂಲಕ ಭಾರತ ಗಡಿಯನ್ನು ಪದೇ ಪದೇ ಅತಿಕ್ರಮಣ ಮಾಡಿಕೊಳ್ಳುತ್ತಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೂ ಚೀನಾದ ಸೈನಿಕರು ಭಾರತದ ಗಡಿಯಲ್ಲಿರುವ ಚುಮರ್ ಸೆಕ್ಟರ್‌ನಲ್ಲಿ ಅಕ್ರಮವಾಗಿ ಟೆಂಟ್‌ಗಳನ್ನು ಹಾಕಿಕೊಂಡು ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಳ್ಳುವಂತೆ ಮಾಡಿದ್ದರು. ಇದಕ್ಕೂ ಮೊದಲು ಇದೇ ಎಲ್‌ಎಸಿ ಬಳಿಯಲ್ಲಿ ಚೀನಾದ ಕೆಲ ಸೈನಿಕರು ಗಡಿಯಲ್ಲಿ ಕುದುರೆ ಸವಾರಿ ಮಾಡುವ ಮೂಲಕ ಭಾರತೀಯ ಸೇನೆಯನ್ನು ಪ್ರಚೋದಿಸಿದ್ದರು.

ಈ ಎಲ್ಲ ಪ್ರಕರಣಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಗಮನಕ್ಕೆ ತಂದಿದ್ದರು. ಭಾರತ ಪ್ರವಾಸ ಕೈಗೊಂಡಿದ್ದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭಾರತ ಗಡಿಯಿಂದ ನಮ್ಮ ಸರಹದ್ದಿಗೆ ವಾಪಸ್ ಆಗುವಂತೆ ಕೆಂಪುಸೇನೆಗೆ ಆದೇಶ ನೀಡಿದ್ದರು. ಆ ಬಳಿಕವಷ್ಟೇ ಚೀನಾ ಸೈನಿಕರು ಭಾರತೀಯ ಗಡಿಯಲ್ಲಿ ಹೂಡಿದ್ದ ಬಿಡಾರಗಳನ್ನು ತೆರವುಗೊಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com