
ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮುರಳಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮುರಳಿಯವರು ಸೋಮವಾರ ಬೆಳಿಗ್ಗೆ 3.25ರ ಸುಮಾರಿನಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
77 ವರ್ಷದ ಮುರಳಿ ಅವರು ಪತ್ನಿ ಹಾಗೂ ಇಬ್ಬರು ಗಂಡುಮಕ್ಕಳನ್ನು ಅಗಲಿದ್ದಾರೆ.
ಮುರಳಿ ಅವರ ಪಾಥೀರ್ವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಮುಂಬೈನ ಕಾಂಗ್ರೆಸ್ ಕಚೇರಿಯಲ್ಲಿ ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ಇಡಲಾಗುವುದು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.
1977-1978 ರಲ್ಲಿ ಮುಂಬೈನ ಮೇಯರ್ ಆಗಿ ಕಾರ್ಯನಿರ್ವಹಿಸಿದ್ದ ಮುರಳಿ, ತದ ನಂತರ ಲೋಕಸಭಾ ಚುನಾವಣೆಯಲ್ಲಿ ಎರಡು ಬಾರಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ, ಪೆಟ್ರೋಲಿಯಂ ಖಾತೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮುಂಬೈನಲ್ಲಿ 22 ವರ್ಷಗಳಕಾಲ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
Advertisement