
ಬೆಂಗಳೂರು: ನಿಗಮ-ಮಂಡಳಿ ನೇಮಕ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.
ವಿಧಾನಸೌಧದ ಎದುರು ಆರೋಗ್ಯ ಕವಚ ಯೋಜನೆಗಾಗಿ 198 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆಗೊಳಿಸಿದ ನಂತರ ಸುದ್ದಿಗಾರರು ಈ ಬಗ್ಗೆ ಪ್ರಶ್ನಿಸಿದಾಗ, ಅವರು ಉತ್ತರಿಸಲು ನಿರಾಕರಿಸಿದ್ದಾರೆ. ಈ ಸಂಬಂಧ ಸಚಿವ ಅಂಬರೀಶ್ ಅವರು ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆಯೂ ಉತ್ತರಿಸಲು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆಯೂ ಉತ್ತರಿಸಲು ನಿರಾಕರಿಸಿದ ಅವರು, ಇಡಿ ಬೆಳವಣಿಗೆ ಬಗ್ಗೆ ಮೌನವಹಿಸಿದ್ದಾರೆ.
ಭಾವಚಿತ್ರ; ಕುತೂಹಲಕಾರಿ ಸಂಗತಿ ಎಂದರೆ 108 ಆಂಬ್ಯುಲೆನ್ಸ್‌ನಲ್ಲಿ ಈ ಬಾರಿ ಸಿಎಂ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಭಾವಚಿತ್ರ ರಾರಾಜಿಸುತ್ತಿದೆ.
ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ಭಾವಚಿತ್ರವನ್ನು 108 ಆಂಬುಲೆನ್ಸ್‌ನಲ್ಲಿ ಅಳವಡಿಸಲಾಗಿತ್ತು. ಕೇಂದ್ರ ಸರ್ಕಾರದ ಅನುದಾನದಲ್ಲಿ ರಾಜ್ಯ ಸರ್ಕಾರ ಪ್ರಚಾರ ಪಡೆಯುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಮುಖಂಡರು ರಾಜ್ಯ.ದ ಎಲ್ಲ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಮಾತ್ರವಲ್ಲ ಭಾವಚಿತ್ರಕ್ಕೆ ಕಪ್ಪು ಬಣ್ಣ ಬಳಿದಿದ್ದರು. ಈಗ ರಾಜ್ಯ ಮತ್ತು ಕೇಂದ್ರದಲ್ಲಿ ಸರ್ಕಾರ ಬದಲಾಗಿದೆ. ಜತೆಗೆ 108 ಆಂಬ್ಯುಲೆನ್ಸ್‌ನಲ್ಲಿ ಭಾವಚಿತ್ರವೂ ಬದಲಾಗಿದೆ.
Advertisement