ರಾಜ್ ನಾಥ್ ಸಿಂಗ್
ದೇಶ
26/11 ತನಿಖೆ; ಪಾಕ್ ಮುತುವರ್ಜಿ ವಹಿಸಬೇಕಿದೆ: ರಾಜ್ ನಾಥ್
26 ನವೆಂಬರ್ 2008 ಮುಂಬೈ ಉಗ್ರ ದಾಳಿಯ 6ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ...
ಮುಂಬೈ: 26 ನವೆಂಬರ್ 2008 ಮುಂಬೈ ಉಗ್ರ ದಾಳಿಯ 6ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ರಾಜ್ ನಾಥ್ ಸಿಂಗ್, ಪ್ರಸ್ತುತ ಪ್ರಕರಣದ ಬಗ್ಗೆ ಪಾಕ್ನಲ್ಲಿ ತನಿಖೆ ನಿಧಾನಗತಿಯಲ್ಲಿದೆ ಎಂದು ಹೇಳಿದ್ದಾರೆ.
ಉಗ್ರರ ದಾಳಿಯಲ್ಲಿ ಮಡಿದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ರಾಜ್ ನಾಥ್ , ಪಾಕ್ ಈ ವಿಷಯದ ಬಗ್ಗೆ ಮುತುವರ್ಜಿ ವಹಿಸಬೇಕೆಂದು ಹೇಳಿದ್ದಾರೆ.
ಮುಂಬೈ ದಾಳಿಯ ತನಿಖೆ ಪಾಕ್ನಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ದಾಳಿಯ ಹಿಂದಿರುವ ವ್ಯಕ್ತಿಗಳನ್ನು ಆದಷ್ಟು ಬೇಗ ಶಿಕ್ಷೆಗೊಳಪಡಿಸಬೇಕಾಗಿದೆ ಎಂದು ಸಚಿವರು ಹೇಳಿದ್ದಾರೆ.
6 ವರ್ಷಗಳ ಹಿಂದೆ ಇದೇ ದಿನದಂದು ಮುಂಬೈನಲ್ಲಿ ಲಷ್ಕರೆ ತೊಯ್ಬಾ ಉಗ್ರರು ದಾಳಿ ನಡೆಸಿದ್ದು, 166 ಮಂದಿಯನ್ನು ಹತ್ಯೆಗೈದಿದ್ದರು.
ಈ ದಾಳಿಯಲ್ಲಿ ಉಗ್ರ ಅಜ್ಮಲ್ ಕಸಬ್ ಮಾತ್ರ ಸೆರೆ ಸಿಕ್ಕಿಬಿದ್ದಿದ್ದ. ಈತನನ್ನು 2012ರಲ್ಲಿ ಗಲ್ಲಿಗೇರಿಸಲಾಯಿತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ