
ಬದೌನ್: ಉತ್ತರಪ್ರದೇಶದ ಬದೌನ್‌ನಲ್ಲಿ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಹೊಸ ಟ್ವೀಸ್ಟ್ ಸಿಕ್ಕಿದ್ದು, ಇದು 'ಕೊಲೆಯಲ್ಲ ಆತ್ಮಹತ್ಯೆ' ಎಂದು ಸಿಬಿಐ ವರದಿಯಲ್ಲಿ ಹೇಳಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಸಹೋದರಿಯರನ್ನು ಕೊಲೆ ಮಾಡಿಲ್ಲ. ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಶವನ್ನು ವರದಿಯಲ್ಲಿ ಹೇಳಿದೆ.
ಕಳೆದ ಮೇ 28ರಂದು ಬದೌನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 14 ಹಾಗೂ 15 ವರ್ಷದ ಸಹೋದರಿಯರಿಬ್ಬರ ಶವ ಪತ್ತೆಯಾಗಿತ್ತು. ಮರು ದಿನ ಸಹೋದರಿಯರನ್ನು ಅಪಹರಿಸಿ, ಅತ್ಯಾಚಾರ ನಡೆಸಿ, ಕೊಲೆ ಮಾಡಿ ಮರಕ್ಕೆ ನೇಣು ಬಿಗಿದಿದ್ದಾರೆ ಎಂದು ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.
Advertisement