ಐಪಿಎಲ್‌ನಿಂದ ಸಿಎಸ್ ಕೆ ತಂಡವನ್ನು ಕಿತ್ತುಹಾಕಿ: ಬಿಸಿಸಿಐಗೆ ಸುಪ್ರೀಂ ಸೂಚನೆ

ಎನ್ ಶ್ರೀನಿವಾಸನ್‌ ಮತ್ತು ಎಂ ಎಸ್ ಧೋನಿ
ಎನ್ ಶ್ರೀನಿವಾಸನ್‌ ಮತ್ತು ಎಂ ಎಸ್ ಧೋನಿ

ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣ ಸಂಬಂಧ ನ್ಯಾ. ಮುಕುಲ್ ಮುದ್ಗಲ್ ನೇತೃತ್ವದ ಸಮಿತಿ ವರದಿಯಾನುಸಾರ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರದ್ದುಗೊಳಿಸುವಂತೆ ಬಿಸಿಸಿಐಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಮುದ್ಗಲ್ ಸಮಿತಿಯ ವರದಿಯನ್ನು ಪಾಲಿಸುವಂತೆ ಬಿಸಿಸಿಐಗೆ ಸೂಚಿಸಿರುವ ಸುಪ್ರೀಂಕೋರ್ಟ್, ನಿಯಮಗಳನ್ನು ಗಾಳಿಗೆ ತೂರಿ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಮಾಲೀಕರು ಭಾಗಿಯಾಗಿರುವುದರಿಂದ ಸಿಎಸ್‌ಕೆ ತಂಡವನ್ನು ಐಪಿಎಲ್‌ನಿಂದ ರದ್ದುಗೊಳಿಸುವಂತೆ ಸೂಚಿಸಿದೆ. ಅಲ್ಲದೆ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಹೊಸದಾಗಿ ಚುನಾವಣೆ ನಡೆಸಿ, ನೂತನ ಸಮಿತಿ ರಚಿಸುವಂತೆ ಬಿಸಿಸಿಐಗೆ ಆದೇಶಿಸಿದೆ.

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಂತೆ ಶ್ರೀನಿವಾಸನ್‌ಗೆ ಸುಪ್ರೀಂ ಸೂಚನೆ


ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಂತೆ ಬಿಸಿಸಿಐ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್‌ಗೆ ಸುಪ್ರೀಂಕೋರ್ಟ್ ಸೂಚಿಸಿದೆ.

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ಸ್ಪರ್ಧಿಸದಂತೆ ಸೂಚಿಸಿದೆ. ಅಲ್ಲದೆ ಇಂಡಿಯಾ ಸಿಮೆಂಟ್‌ನಲ್ಲಿ ಶ್ರೀನಿವಾಸನ್ ಅವರ ಷೇರು ಎಷ್ಟೀದೆ ಎಂಬುದನ್ನು ತಿಳಿಸುವಂತೆ ಇಂಡಿಯಾ ಸಿಮೆಂಟ್ ಸಂಸ್ಥೆ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com