
ಇಸ್ಲಾಮಾಬಾದ್: ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಅಬ್ದುಲ್ ರಶೀದ್, ಅವರ ತಾಯಿ ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಪ್ರಕರಣ ಕುರಿತಂತೆ ಇಂದು ವಿಚಾರಣೆ ನಡೆಸಿದ ಇಸ್ಲಾಮಾಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ವಿಚಾರಣಾ ಹಾಜರಾತಿ ವಿನಾಯಿತಿ ಕುರಿತಂತೆ ಮುಷರಫ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದು, ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಅಲ್ಲದೆ, ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಿದೆ.
ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಅಬ್ದುಲ್ ರಶೀದ್, ಅವರ ತಾಯಿ ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಹೆಸರು ಕೇಳಿಬಂದಿತ್ತು. ಇದರಂತೆ ಪೊಲೀಸರು ಪರ್ವೇಜ್ ಮುಷರಫ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಆರೋಗ್ಯ ಹಾಗೂ ಭದ್ರತೆಗಳ ನೆಪ ಹೂಡತ್ತಲೇ ನ್ಯಾಯಾಲಯದಿಂದ ವಿನಾಯಿತಿ ಪಡೆದು ವಿಚಾರಣೆಗೆ ಪರ್ವೇಜ್ ಮುಷರಫ್ ಹಾಜರಾಗುತ್ತಿರಲಿಲ್ಲ. ಹಾಗಾಗಿ ಪರ್ವೇಜ್ ಮುಷರಫ್ ಅವರ ಈ ಪ್ರತಿಕ್ರಿಯೆಗೆ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಮುಷರಫ್ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
Advertisement