ಜಮ್ಮು ಮತ್ತು ಕಾಶ್ಮೀರ ಸಿಎಂ ಮುಫ್ತಿ ಪುತ್ರಿಗೆ ಮೋದಿ ಸಂಪುಟದಲ್ಲಿ ಸ್ಥಾನ?

ಚಿಕ್ಕ ಸಂಪುಟದ ಮೂಲಕ ಉತ್ತಮ ಆಡಳಿತ ನೀಡಲು ಮುಂದಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಸಚಿವರ ಮೇಲಿನ ಒತ್ತಡ ಕಡಿಮೆ ಮಾಡವ ಉದ್ದೇಶದಿಂದ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ...
ಮೆಹಬೂಬ್ ಮುಫ್ತಿಗೆ
ಮೆಹಬೂಬ್ ಮುಫ್ತಿಗೆ
Updated on: 

ನವದೆಹಲಿ: ಚಿಕ್ಕ ಸಂಪುಟದ ಮೂಲಕ ಉತ್ತಮ ಆಡಳಿತ ನೀಡಲು ಮುಂದಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಸಚಿವರ ಮೇಲಿನ ಒತ್ತಡ ಕಡಿಮೆ ಮಾಡವ ಉದ್ದೇಶದಿಂದ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಮೋದಿ ಸಂಪುಟದಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ  ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿಗೂ ಅವಕಾಶ ಸಿಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಏಪ್ರಿಲ್ 8ರಂದು ಕೇಂದ್ರ ಸಂಪುಟ ವಿಸ್ತರಣೆ ನಡೆಯಲಿದ್ದು ಮೂವರು ಸಹಾಯಕ ಸಚಿವರಿಗೆ ಸಂಪುಟ ದರ್ಜೆ ಸ್ಥಾನಮಾನ ಸಿಗುವ ಸಾಧ್ಯತೆಗಳಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ನಜ್ಮಾ ಹೆಫ್ತುಲ್ಲಾ ಸೇರಿದಂತೆ ಒಂದಿಬ್ಬರು ಸಚಿವರನ್ನು ಕೈ ಬಿಡುವ ಸಾಧ್ಯತೆ ಇದೆ.


ಜಮ್ಮು ಮತ್ತು ಕಾಶ್ಮೀರದ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರು ಮೋದಿ ಸಂಪುಟ ಸೇರಲಿದ್ದಾರೆ ಎನ್ನಲಾಗುತ್ತಿದ್ದು ಸ್ವತಃ ಮೋದಿ ಅವರೇ ಈ ಬಗೆಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಇದೀಗ ಸಹಾಯಕ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ, ರಾಜೀವ್ ಪ್ರತಾಪ್ ರೂಡಿ, ಮನೋಜ್ ಸಿನ್ಹಾ ಅವರಿಗೆ ಬಡ್ತಿ ಸಿಗುವುದು ಬಹುತೇಕ ಖಚಿತವಾಗಿದ್ದು ಹಣಕಾಸು ಖಾತೆ ಸಹಾಯಕ ಸಚಿವ ಜಯಂತ್ ಸಿನ್ಹಾ ಅವರಿಗೆ ಕಾರ್ಪೊರೇಟ್ ವ್ಯವಹಾರಗಳ ಹೆಚ್ಚುವರಿ ಹೊಣೆ ನೀಡಲಾಗುತ್ತದೆ ಎಂಬ ಮಾಹಿತಿ ಲಭಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com