ದೆಹಲಿಯ ಓಕ್ಲಾ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ಅವಗಡ

ದಕ್ಷಿಣ ದೆಹಲಿಯ ಓಕ್ಲಾ ಕೈಗಾರಿಕೆ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಗಡ ಸಂಭವಿಸಿದೆ.
ದಕ್ಷಿಣ ದೆಹಲಿಯಲ್ಲಿ ಅಗ್ನಿ ಅವಗಡ
ದಕ್ಷಿಣ ದೆಹಲಿಯಲ್ಲಿ ಅಗ್ನಿ ಅವಗಡ

ನವದೆಹಲಿ: ದಕ್ಷಿಣ ದೆಹಲಿಯ ಓಕ್ಲಾ ಕೈಗಾರಿಕೆ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಗಡ ಸಂಭವಿಸಿದೆ.

ದೆಹಲಿ ಅಗ್ನಿಶಾಮಕ ಸಿಬ್ಬಂದಿಗಳ ಪ್ರಕಾರ, ಬೆಳಗ್ಗೆ 8 ಗಂಟೆಯ ಸಮಯದಲ್ಲಿ ಓಕ್ಲಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಗಡ ಸಂಭವಿಸಿರುವ ಕರೆ ಬಂದಿದ್ದು, ಕೂಡಲೇ ಸ್ಥಳಕ್ಕೆ 14 ಅಗ್ನಿಶಾಮಕ ವಾಹನಗಳು ಬಂದಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಪ್ರವೃತ್ತರಾಗಿದ್ದೇವೆ ಎಂದರು.

ಭಾನುವಾರ ರಜೆ ದಿನವಾಗಿದ್ದರಿಂದ ಓಕ್ಲಾ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚು ಜನರು ಇಲ್ಲದೆ ಇರುವುದರಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿದ್ದಾರೆ.

ಅಗ್ನಿ ಅವಗಡಕ್ಕೆ ಕಾರಣವೆನೆಂಬುದು ಇಲ್ಲಿಯವರೆಗೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com