
ನವದೆಹಲಿ: ಆರೆಸ್ಸೆಸ್ಸ್ ನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾತ್ರಕ್ಕೆ ನಾನು ಸಂಘಟನೆಯ ಅಭಿಪ್ರಾಯವನ್ನು ಬೆಂಬಲಿಸಿದೆ ಎಂದು ಅರ್ಥೈಸಿಕೊಳ್ಳಬೇಕಾಗಿಲ್ಲ ಎಂದು ವಿಪ್ರೋ ಸಂಸ್ಥೆಯ ಮುಖ್ಯಸ್ಥ ಅಜೀಂ ಪ್ರೇಮ್‌ಜಿ ಹೇಳಿದ್ದಾರೆ.
ಸಾಮಾಜಿಕ ಕ್ಷೇತ್ರದಲ್ಲಿ ಆರೆಸ್ಸೆಸ್ಸ್ ಕೈಗೊಂಡ ಸೇವೆಯನ್ನು ಗೌರವಿಸುತ್ತೇನೆ. ಹಾಗಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ ಎಂದಿದ್ದಾರೆ ಪ್ರೇಮ್‌ಜಿ.
ದೆಹಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಭಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರೇಮ್‌ಜಿ, ನನ್ನನ್ನು ಭಾಗವತ್ ಈ ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ತನ್ನ ಉಪಸ್ಥಿತಿಯನ್ನು ಬೇರೆ ರೀತಿಯಲ್ಲಿ ಅರ್ಥ ಮಾಡಿಕೊಳ್ಳುವುದು ಬೇಡವೆಂದು ಹೇಳಿದ್ದಾರೆ.
ಆರೆಸ್ಸೆಸ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಸಾಮಾಜಿಕ ತಾಣಗಳಲ್ಲಿ ಪ್ರೇಮ್‌ಜಿ ವಿರುದ್ಧ ಟೀಕಾ ಪ್ರಹಾರಗಳು ನಡೆದಿದ್ದವು.
Advertisement