ಅಮಿತಾಭ್ ಬಚ್ಚನ್ ಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನುಬುಧವಾರ ಪ್ರದಾನ ಮಾಡಿದ್ದಾರೆ.
ಅಮಿತಾಭ್ ಬಚ್ಚನ್ ಗೆ ಪದ್ಮವಿಭೂಷಣ ಪ್ರದಾನ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಅಮಿತಾಭ್ ಬಚ್ಚನ್ ಗೆ ಪದ್ಮವಿಭೂಷಣ ಪ್ರದಾನ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುತ್ತಿದ್ದು, ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗಿರುವ ಪದ್ಮವಿಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬುಧವಾರ ಪ್ರದಾನ ಮಾಡಿದ್ದಾರೆ.

ಕಲಾ ಕ್ಷೇತ್ರದಲ್ಲಿ ತಮ್ಮ ಚಾಪು ಮೂಡಿಸಿರುವ ಅಮಿತಾಭ್ ಬಚ್ಚನ್ ಅವರನ್ನು ದೇಶದ ಎರಡನೇ ಅತ್ಯುನ್ನತ ವ್ಯಕ್ತಿ ಎಂದು ಪರಿಗಣಿಸಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿಯನ್ನು ನೀಡಲಾಗಿದ್ದು. ಇವರ ಜೊತೆಗೆ ಇತರೆ 8 ಮಂದಿಗೂ ಕೂಡ ಪ್ರದ್ಮ ವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇದರಂತೆ ಸಾಮಾಜಿಕ ಸೇವೆ ಪರಿಗಣಿಸಿ ರಾಜ್ಯದ ಮತ್ತೋರ್ವ ಸಾಧಕರಾಗಿರುವ ನಡೆದಾಡುವ ದೇವರು ಎಂದು ಖ್ಯಾತಿಗಳಿಸಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳಾದ ಪೀಠಾಧ್ಯಕ್ಷ ಶಿವಕುಮಾರ ಸ್ವಾಮಿ ಅವರಿಗೂ ಕೂಡ ಪ್ರಶಸ್ತಿ ಲಭಿಸಿದೆ. ಆದರೆ ಪ್ರಶಸ್ತಿ ಸ್ವೀಕರಿಸಲು ನವದೆಹಲಿಯವರೆಗೂ ಶಿವಕುಮಾರ ಸ್ವಾಮಿ ಅವರು ಹೋಗಲು ಸಾಧ್ಯವಾಗಿಲ್ಲ. ಹಾಗಾಗಿ ಸಮಾರಂಭದಲ್ಲಿ ಶಿವಕುಮಾರ ಸ್ವಾಮೀಜಿಗಳು ಭಾಗವಿಹಿಸಿರಲಿಲ್ಲ ಎನ್ನಲಾಗುತ್ತಿದೆ. ಶ್ರೀಗಳ ಪರವಾಗಿಯೂ ಯಾರೊಬ್ಬರೂ ಪ್ರಶಸ್ತಿಯನ್ನು ಸ್ವೀಕರಿಸಲು ಹೋಗಿಲ್ಲ.

ಪ್ರಶಸ್ತಿ ಸಮಾರಂಭದಲ್ಲಿ ಸಾರ್ವಜನಿಕ ಸೇವೆಗಾಗಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್, ವೀರೇಂದ್ರ ಹೆಗ್ಗಡೆ ಹಾಗೂ ಉದ್ಯಮ ಕ್ಷೇತ್ರದ ಸಾಧನೆಗಾಗಿ ಉದ್ಯಮಿ ಬಿಲ್ ಗೇಟ್ಸ್, ಕಲಾಕ್ಷೇತ್ರದ ಮತ್ತೊಬ್ಬ ವ್ಯಕ್ತಿಯಾದ ಹಿಂದಿ ಭಾಷೆಯ ಖ್ಯಾತ ನಟ ದಿಲೀಪ್ ಕುಮಾರ್ ಅವರಿಗೂ ಪ್ರಶಸ್ತಿ ನೀಡಿ ಗೌರವ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com