ಉಗ್ರ ಲಖ್ವಿ ತಕ್ಷಣ ಬಿಡುಗಡೆಗೆ ಪಾಕ್ ಕೋರ್ಟ್ ಆದೇಶ

ಝಕಿ ಉರ್ ರೆಹಮಾನ್ ಲಖ್ವಿ
ಝಕಿ ಉರ್ ರೆಹಮಾನ್ ಲಖ್ವಿ

ಇಸ್ಲಾಮಾಬಾದ್: ಮುಂಬೈ ದಾಳಿಯ ಪ್ರಮುಖ ರೂವಾರಿ, ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಝಕಿ ಉರ್ ರೆಹಮಾನ್ ಲಖ್ವಿಯನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಗುರುವಾರ ಪಾಕಿಸ್ತಾನ ಕೋರ್ಟ್ ಆದೇಶಿಸಿದೆ.

ಲಖ್ವಿ ಬಂಧನ ಕಾನೂನು ಬಾಹಿರ ಎಂದಿರುವ ಲಾಹೋರ್ ಹೈಕೋರ್ಟ್, ಪಾಕಿಸ್ತಾನದ ರಾವಲ್ಪಿಂಡಿ ಜೈಲಿನಲ್ಲಿರುವ ಲಖ್ವಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿರುವುದಾಗಿ ಜಿಯೊ ಟಿವಿ ವರದಿ ಮಾಡಿದೆ.

ಪಾಕಿಸ್ತಾನ ಸರ್ಕಾರ ಲಖ್ವಿಯ ರಹಸ್ಯ ದಾಖಲೆ ಪತ್ರಗಳು ಮತ್ತು ಆತನ ಚಟುವಟಿಕೆಯ ವಿವರ ಸಲ್ಲಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಲಾಹೋರ್ ಕೋರ್ಟ್, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಯಿದೆಯಡಿ ಲಖ್ವಿ ಬಂಧನವನ್ನು ರದ್ದುಗೊಳಿಸಿ, ಬಿಡುಗಡೆಗೆ ಆದೇಶಿಸಿದೆ.

ಝಕಿ ಉರ್ ರೆಹಮಾನ್ ಲಖ್ವಿ ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 2009ರಿಂದಲೂ ಜೈಲುವಾಸದಲ್ಲಿದದ್ದು, ಕಳೆದ ವರ್ಷ ಡಿ.18ರಂದು ಭಯೋತ್ಪಾದನಾ ನಿಗ್ರಹ ಕೋರ್ಟ್ ಲಖ್ವಿಗೆ ಜಾಮೀನು ನೀಡಿತ್ತು. ಆದರೆ ಮತ್ತೆ ಆತನನ್ನು ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿದ್ದ ಲಖ್ವಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದನು. ನಂತರ ಹೈಕೋರ್ಟ್ ಆತನ ಬಂಧನದ ಆದೇಶ ಅಮಾನತಿನಲ್ಲಿಟ್ಟು ಜಾಮೀನು ನೀಡಿತ್ತು.

ಪಾಕಿಸ್ತಾನ ಕೋರ್ಟ್ ಲಖ್ವಿಗೆ ಹಲವು ಬಾರಿ ಜಾಮೀನು ನೀಡಿದರೂ, ಭಾರತದ ಒತ್ತಡಕ್ಕೆ ಮಣಿದು ಪಾಕಿಸ್ತಾನ ಸರ್ಕಾರ ಉಗ್ರನ ಬಿಡುಗಡೆಯನ್ನು ತಡೆಯುತ್ತಾ ಬಂದಿದೆ. ಈಗ ಮತ್ತೆ ಉಗ್ರನ ಬಿಡುಗಡೆಗೆ ಕೋರ್ಟ್ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com