
ನವದೆಹಲಿ: ಗಲ್ಲು ಶಿಕ್ಷೆಯ ತೀರ್ಪು ಪುನರ್ ಪರಿಶೀಲಿಸುವಂತೆ ಕೋರಿ 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಯಾಕೂಬ್ ಅಬ್ದುಲ್ ರಜಾಕ್ ಮೆಮೊನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ವಜಾಗೊಳಿಸಿದ್ದು, ಯಾಕೂಬ್ ಗೆ ನೀಡಲಾಗಿದ್ದ ಗಲ್ಲು ಶಿಕ್ಷೆಯನ್ನು ಗುರುವಾರ ಎತ್ತಿ ಹಿಡಿದಿದೆ.
ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಯಾಕೂಬ್ ನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಆರ್. ದವೆ ಅವರ ನೇತೃತ್ವದ ತ್ರಿಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿತು.
2014ರ ಜೂನ್ 2ರಂದು ಮೆಮೊನ್ ಮರಣ ದಂಡನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಇದಕ್ಕೂ ಮೊದಲು, 2013ರ ಮಾರ್ಚ್ 21ರಂದು ಕೆಳ ಹಂತದ ನ್ಯಾಯಾಲಯ ಮೆಮೊನ್‌ಗೆ ವಿಧಿಸಿದ್ದ ಮರಣ ದಂಡನೆಯನ್ನು ಎತ್ತಿ ಹಿಡಿದಿತ್ತು.
ಪ್ರಕರಣ ಸಂಬಂಧ 10 ಜನರಿಗೆ ಮರಣ ದಂಡನೆ ವಿಧಿಸಿ ಮಹಾರಾಷ್ಟ್ರದ ವಿಶೇಷ ಟಾಡಾ ನ್ಯಾಯಾಲಯ ತೀರ್ಪು ನೀಡಿತ್ತು. ಆದರೆ 10 ಜನರ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಜೀವಾವಧಿಗೆ ಪರಿವರ್ತಿಸಿತ್ತು.
Advertisement