ದೆಹಲಿ ಟ್ಯಾಕ್ಸಿಯಲ್ಲಿ ಮತ್ತೊಬ್ಬ ಮಹಿಳೆ ಮೇಲೆ ಅತ್ಯಾಚಾರ, ಆರೋಪಿ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 32 ವರ್ಷದ ಮಹಿಳೆ ಮೇಲೆ ಕ್ಯಾಬ್ ಚಾಲಕ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಿರುವುದಾಗಿ ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 32 ವರ್ಷದ ಮಹಿಳೆ ಮೇಲೆ ಕ್ಯಾಬ್ ಚಾಲಕ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಿರುವುದಾಗಿ ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.

ಕಳೆದ ನಾಲ್ಕು ತಿಂಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು, ದೆಹಲಿಯ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ರಾತ್ರಿ ಮಹಿಳೆಯನ್ನು ಪಿಕ್ ಮಾಡಿದ ಕ್ಯಾಬ್ ಚಾಲಕ, ದ್ವಾರಕಾದ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜೌರಿ ಗಾರ್ಡ್ ನಲ್ಲಿರುವ ಶಾಪಿಂಗ್ ಮಾಲ್ ಗೆ ತೆರಳಿದ್ದ ಮಹಿಳೆ ವಾಪಸ್ ರಾತ್ರಿ 10.30ರ ಸುಮಾರಿಗೆ ಮಧು ವಿಹಾರದಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ದೆಹಲಿ ಉಪ ಪೊಲೀಸ್ ಆಯುಕ್ತ ಆರ್ ಎ ಸಂಜೀವ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com