

ನವದೆಹಲಿ: ಭ್ರಷ್ಟಾಚಾರದ ಆರೋಪದ ಮೇಲೆ ಶಾಲೆಯೊಂದರ ಪ್ರಾಂಶುಪಾಲರನ್ನು ಆಮ್ ಆದ್ಮಿ ಪಕ್ಷ ಅಮಾನತುಗೊಳಿಸಿದೆ.
ಭ್ರಷ್ಟಚಾರ ಮುಕ್ತ ಆಡಳಿತ ನಡೆಸುವ ನಿಟ್ಟಿನಲ್ಲಿ ಮುನ್ನುಗ್ಗಿರುವ ಆಪ್ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬುಧವಾರ ದೆಹಲಿಯಲ್ಲಿನ ಪ್ರೆಸಿಡೆಂಟ್ ಎಸ್ಟೇಟ್ ನಲ್ಲಿನ ರಾಜೇಂದ್ರ ಪ್ರಸಾದ್ ಶಾಲೆಗೆ ದಿಢೀರ್ ಅಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಹಣಕಾಸು ನಿರ್ವಹಣೆಯಲ್ಲಿ ಭಾರೀ ಪ್ರಮಾಣದ ಅವ್ಯವಹಾರವಾಗಿರುವುದು ಸಿಸೋಡಿಯಾ ಗಮನಕ್ಕೆ ಬಂದಿದೆ.
ಶಾಲೆಯ ಅಡುಗೆ ಕೋಣೆಯಲ್ಲಿ ಗ್ಯಾಸ್ ಸಿಲಿಂಡರ್ ಸೇರಿದಂತೆ ಮೂಲಭೂತ ವ್ಯವಸ್ಥೆ ಇಲ್ಲದಿರುವುದು ಸೇರಿದಂತೆ ಅಸಮರ್ಪಕ ಅವ್ಯವಸ್ಥೆ, ಹಣಕಾಸು ನಿರ್ವಹಣೆಯಲ್ಲಿನ ಲೋಪಗಳು ಪರಿಶೀಲನೆಯಲ್ಲಿ ಕಂಡು ಬಂದಿದೆ.
ಪ್ರತಿ ತಿಂಗಳು ಸಾವಿರಾರು ರೂಪಾಯಿ ನಕಲಿ ರಶೀದಿ ಮಾಡಿ ಖರೀದಿ ಮಾಡಿರುವುದಾಗಿ ಲೆಕ್ಕ ತೋರಿಸಿದ್ದು ಏನನ್ನೂ ಖರೀದಿಸಿಲ್ಲ. ಈ ಹಿನ್ನಲೆಯಲ್ಲಿ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದ್ದು, ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.