ದಕ್ಷಿಣ ಕೊರಿಯಾಗೆ ತೆರಳಲಿರುವ ಪರಿಕ್ಕರ್

ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗುರುವಾರದಿಂದ ದಕ್ಷಿಣ ಕೊರಿಯಾಗೆ ಭೇಟಿ ನೀಡಲಿದ್ದಾರೆ....
ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
Updated on

ನವದೆಹಲಿ: ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗುರುವಾರದಿಂದ ದಕ್ಷಿಣ ಕೊರಿಯಾಗೆ ಭೇಟಿ ನೀಡಲಿದ್ದಾರೆ.

ಮೋದಿ ರ್ಕಾರದ ಮೇಕ್ ಇನ್ ಇಂಡಿಯಾ ಯೋಜನೆ ಬಗ್ಗೆ ಮಾತುಕತೆ ನಡೆಸುವ ನಿಟ್ಟಿನಲ್ಲಿ ಈ ಪ್ರವಾಸ ಕೈಗೊಂಡಿದ್ದಾರೆ. ಇನ್ನು ಒಂದು ತಿಂಗಳಲ್ಲಿ ನರೇಂದ್ರ ಮೋದಿ ಅವರು ದಕ್ಷಿಣ ಕೊರಿಯಾ ಪ್ರವಾಸ ಕೈಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಇದು ಅತ್ಯಂತ ಮಹತ್ವ ಪಡೆದಿದೆ.

ಜತೆಗೆ ಕೊರಿಯಾದ ಸಹಯೋಗದೊಂದಿಗೆ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಶಸ್ತ್ರಾಸ್ತ್ರಗಳ ನಿರ್ಮಾಣದ ಬಗ್ಗೆ ಕೂಡ ಮಾತುಕತೆಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ. ಭಾರತ ಹಾಗೂ ದಕ್ಷಿಣ ಕೊರಿಯಾದ ನಡುವಿನ ಸೇನಾ ಬಾಂಧವ್ಯ ವರ್ಧನೆಗೂ ಈ ಭೇಟಿ ಸಹಕಾರಿಯಾಗಲಿದೆ ಎನ್ನಲಾಗಿದೆ. ಕಳೆದ ತಿಂಗಳು ಪರಿಕ್ಕರ್ ಜಪಾನ್‍ಗೆ ಭೇಟಿ ನೀಡಿದ್ದು ಇದು ಅವರ ಎರಡನೇ ವಿದೇಶಿ ಭೇಟಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com