ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಪುನಾರಂಭ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಯಶಸ್ವಿಯಾಗಿ ನಡೆದಿದ್ದು, ಈ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭಗೊಂಡಿದೆ.
ಕೆಎಸ್ಆರ್‌ಟಿಸಿ, ಬಿಎಂಟಿಸಿ
ಕೆಎಸ್ಆರ್‌ಟಿಸಿ, ಬಿಎಂಟಿಸಿ

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಯಶಸ್ವಿಯಾಗಿ ನಡೆದಿದ್ದು, ಈ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭಗೊಂಡಿದೆ.

ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಮಾರುಕಟ್ಟೆ ಬಸ್ ನಿಲ್ದಾಣ, ಶಿವಾಜಿನಗರ ಸೇರಿದಂತೆ ಬೆಂಗಳೂರಿನಾದ್ಯಂತ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ ಪರ ಊರುಗಳಿಗೆ ಹೊರಡಲು ಬಂದಿದ್ದ ಪ್ರಯಾಣಿಕರು ಬಸ್ ಗಳು ಇಲ್ಲದ ಕಾರಣ ಪರದಾಡುವಂತ ಪರಿಸ್ಥಿತಿ ಎದುರಾಗಿತ್ತು. ಬಂದ್ ಗೆ ಕರೆ ನೀಡಿದ್ದ ಕನ್ನಡ ಪರ ಸಂಘಟನೆಗಳ ನಿಯೋಗ ಸಂಜೆ 4 ಗಂಟೆ ಸುಮಾರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಂತರ ಪ್ರಯಾಣಿಕರ ಅನುಕೂಲಕ್ಕಾಗಿ ಅಧಿಕಾರಿಗಳು ಎಲ್ಲಾ ಡಿಪೋಗಳಿಗೆ ಸಂಚಾರವನ್ನು ಆರಂಭಿಸುವಂತೆ ಸೂಚಿಸಿದ್ದರು.

ಅಧಿಕಾರಿಗಳು ಸೂಚನೆ ಹಿನ್ನೆಲೆ ಕೆಎಸ್ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್ ಗಳ ಎಂದಿನಂತೆ ಸಂಚಾರ ಆರಂಭಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com