ಜಮ್ಮುವಿನಲ್ಲಿ ಭುಗಿಲೆದ್ದ ಹಿಂಸಾಚಾರ: ಓರ್ವ ಸಾವು

ಟ್ರಾಲ್ ಪಟ್ಟಣದಲ್ಲಿ ಯುವಕನೊಬ್ಬನನ್ನು ಉಗ್ರನೆಂದು ಶಂಕಿಸಿ ಎನ್ ಕೌಂಟರ್ ಮಾಡಿದ ಪ್ರಕರಣ ವಿರೋಧಿಸಿ ಪ್ರತ್ಯೇಕವಾದಿಗಳು ನಡೆಸುತ್ತಿರುವ...
ಶ್ರೀನಗರದಲ್ಲಿ ನಡೆಯುತ್ತಿರುವ ಗಲಭೆ
ಶ್ರೀನಗರದಲ್ಲಿ ನಡೆಯುತ್ತಿರುವ ಗಲಭೆ
Updated on: 

ಶ್ರೀನಗರ: ಟ್ರಾಲ್ ಪಟ್ಟಣದಲ್ಲಿ ಯುವಕನೊಬ್ಬನನ್ನು ಉಗ್ರನೆಂದು ಶಂಕಿಸಿ ಎನ್ ಕೌಂಟರ್ ಮಾಡಿದ ಪ್ರಕರಣ ವಿರೋಧಿಸಿ ಪ್ರತ್ಯೇಕವಾದಿಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ.

ಪ್ರತ್ಯೇಕವಾದಿಗಳ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನಲೆಯಲ್ಲಿ ಸಿಆರ್ ಪಿಎಫ್ ಸಿಬ್ಬಂದಿ ಗುಂಡ ಹಾರಿಸಿದ್ದಾರೆ. ಸಿಆರ್ ಪಿಎಫ್ ಯೋಧರ ಗುಂಡಿ ಓರ್ವ ಯುವಕ ಸಾವನ್ನಪ್ಪಿದ್ದು, ಮೂವರು ಯುವಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಯಗೊಂಡವರಲ್ಲಿ ಓರ್ವನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನುಳಿದ ಇಬ್ಬರನ್ನು ಪೊಲೀಸರೇ ಪ್ರಥಮ ಚಿಕಿತ್ಸೆ ನೀಡಿ, ವಶದಲ್ಲಿಟ್ಟುಕೊಂಡಿದ್ದಾರೆ.

ಇತ್ತೀಚೆಗೆ ಭಯೋತ್ಪಾದಕ ನಿಗ್ರಹ ದಳ ನಡೆಸಿದ ದಾಳಿಯಲ್ಲಿ ದಕ್ಷಿಣ ಕಾಶ್ಮೀರದ ಯುವಕ ಹತ್ಯೆಗೀಡಾಗಿದ್ದನು. ಇದನ್ನು ವಿರೋಧಿಸಿ ಹಾಗೂ ಪಾಕಿಸ್ತಾನದ ಬಾವುಟ ಹಾರಿಸಿದ ಪ್ರಕರಣಕ್ಕೆಸಂಬಂಧಿಸಿದಂತೆ ಪ್ರತ್ಯೇಕತಾವಾದಿ ಮಸರತ್ ಅಲಂ ಬಂಧನ ವಿರೋದಿಸಿ ಟ್ರಾಲ್ ಪಟ್ಟಣದ ಜನತೆ ಹಾಗೂ ಪ್ರತ್ಯೇಕತಾವಾದಿಗಳು ಪ್ರತಿಭಟನೆ ಕೈಗೊಂಡಿದ್ದರು.

ಪ್ರತಿಭಟನೆ ವೇಳೆ ಪ್ರತ್ಯೇಕವಾದಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಸಿಡಿಸಿದ್ದರು. ನಿನ್ನೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಸಂಘರ್ಷದಲ್ಲಿ ಪೊಲೀಸರು ಸೇರಿದಂತೆ ಕನಿಷ್ಠ 14 ಜನರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com