
ನವದೆಹಲಿ: ಸಂಸತ್ತಿನಲ್ಲಿ ರಾಹುಲ್ ಭಾಷಣಕ್ಕೆ ತಡೆಯೊಡ್ಡಿದರೆ ತಾವು ಸಭಾತ್ಯಾಗ ಮಾಡುವುದಾಗಿ ವಿಪಕ್ಷಗಳು ಬೆದರಿಕೆಯೊಡ್ಡಿವೆ. ಸೋಮವಾರ ಸಂಸತ್ತಿನಲ್ಲಿ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿತರುವ ಮಸೂದೆಗೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಅಂಗೀಕಾರ ಬಯಸಿದ್ದು, ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಇದಕ್ಕೆ ತಕರಾರು ಒಡ್ಡಿವೆ.
ಸಂಸತ್‌ನಲ್ಲಿ ರಾಹುಲ್ ಗಾಂಧಿ ಭೂಸ್ವಾಧೀನ ಕಾಯ್ದೆಯ ವಿರುದ್ಧ ಮಾತಾಡಲಿದ್ದು, ರಾಹುಲ್‌ಗೆ ಭಾಷಣ ಮಾಡಲು ಅವಕಾಶ ನೀಡಬೇಕೆಂದು ವಿಪಕ್ಷಗಳು ಪಟ್ಟು ಹಿಡಿದಿವೆ.
ನರೇಂದ್ರ ಮೋದಿ ಸರ್ಕಾರ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆ ಮಂಡನೆಗೆ ಯೋಚಿಸುತ್ತಿದ್ದರೆ ಇತ್ತ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಸೋನಿಯಾ ಗಾಂಧಿ ಮತ್ತು ರಾಹುಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಕಾರ್ಯತಂತ್ರ ರೂಪಿಸಿದ್ದಾರೆ.
ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಸಂಸತ್‌ನಲ್ಲಿ ಭಾಷಣ ಮಾಡಲಿದ್ದಾರೆ. ಈ ಭಾಷಣದಲ್ಲಿ ಅವರು ಅಕಾಲಿಕ ಮಳೆಯಿಂದಾಗಿ ರೈತರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಮಾತಾಡಲಿದ್ದಾರೆ.
Advertisement