

ನವದೆಹಲಿ: ದೆಹಲಿಯಲ್ಲಿ 10 ವರ್ಷ ಹಳೆಯ ಡಿಸೇಲ್ ವಾಹನಗಳಿಗೆ ನಿಷೇಧ ಹೇರಿದ್ದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‌ಜಿಟಿ)ದ ಆದೇಶದ ವಿರುದ್ಧ ಖಾಸಗಿ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ರಾಷ್ಟ್ರರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಮಹತ್ವದ ತೀರ್ಪು ನೀಡಿದ್ದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ, 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ನಿಷೇಧ ಹೇರಿತ್ತು.ಆದರೆ ಕಳೆದ ವಾರ ತಾನೇ ನೀಡಿದ್ದ ನಿಷೇಧ ಆದೇಶಕ್ಕೆ ಎರಡು ವಾರ ತಡೆ ನೀಡಿದೆ.
ಈ ಸಂಬಂಧ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಕರಣ, ಡೀಸೆಲ್ ವಾಹನಗಳನ್ನು ನಿಷೇಧಿಸುವ ಕುರಿತು ವರದಿ ಸಲ್ಲಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚಿಸೆದೆ.