

ನವದೆಹಲಿ: ದೆಹಲಿ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ 2 ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದೆ.
ರೈಲು ಶುದ್ಧೀಕರಣ ಸ್ಥಳದಲ್ಲಿ ನಿಂತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ಎಸಿ ಕೋಚ್ ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಸಂಭವಿಸಿದೆ. ಬೆಂಕಿ ಕೆನ್ನಾಗಿಲಿದೆ ಪಕ್ಕದಲ್ಲಿ ನಿಂತಿದ್ದ ಮತ್ತೊಂದು ರೈಲಿಗೂ ತಾಕಿದೆ. ಇದರ ಪರಿಣಾಮ ಎರಡೂ ರೈಲುಗಳಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಘಟನೆಯಿಂದ ಈ ವರೆಗೂ ಯಾವುದೇ ಪ್ರಾಣಪಾಯವಾಗಿರುವ ಕುರಿತಂತೆ ವರದಿಯಾಗಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.